ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪುಣೆ ಮಹಾನಗರ ಪಾಲಿಕೆಯ ಆವರಣದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಅನಾವರಣಗೊಳಿಸಿದರು. ಪ್ರತಿಮೆಯು 1,850 ಕೆಜಿ ಗನ್ಮೆಟಲ್ನಿಂದ ಮಾಡಲ್ಪಟ್ಟಿದೆ ಮತ್ತು ಸುಮಾರು 9.5 ಅಡಿ ಎತ್ತರವಿದೆ.
ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ, ಉಪಮುಖ್ಯಮಂತ್ರಿ ಅಜಿತ್ ಪವಾರ್, ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ಮತ್ತು ಪುಣೆ ಮೇಯರ್ ಮುರಳೀಧರ್ ಮೊಹೋಲ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಅನಾವರಣಗೊಳಿಸಿದ ನಂತರ, ಪ್ರಧಾನಿ ಮೋದಿ ಅವರು ಒಟ್ಟು 32.2 ಕಿಮೀ ಪುಣೆ ಮೆಟ್ರೋ ರೈಲು ಯೋಜನೆಯ 12 ಕಿಮೀ ವ್ಯಾಪ್ತಿಯನ್ನು ಉದ್ಘಾಟಿಸಿದರು. ಈ ಯೋಜನೆಯು ಒಟ್ಟು 11,400 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ ಮತ್ತು ಪುಣೆಯಲ್ಲಿ ನಗರ ಚಲನಶೀಲತೆಗಾಗಿ ವಿಶ್ವ ದರ್ಜೆಯ ಮೂಲಸೌಕರ್ಯವನ್ನು ಒದಗಿಸುವ ಪ್ರಯತ್ನವಾಗಿದೆ ಎಂದು ಪ್ರಧಾನ ಮಂತ್ರಿಗಳ ಕಚೇರಿ ಹೇಳಿದೆ.
ಅಲ್ಲಿಂದ ಆನಂದನಗರ ಮೆಟ್ರೋ ನಿಲ್ದಾಣದವರೆಗೆ ತಮ್ಮ ‘ಯುವ ಗೆಳೆಯರೊಂದಿಗೆ’ ಮೆಟ್ರೋ ಸವಾರಿಯನ್ನೂ ಮೋದಿ ಕೈಗೊಂಡರು.
On landing in Pune, PM @narendramodi unveiled a statue of Chhatrapati Shivaji Maharaj. pic.twitter.com/0zKyhORNRI
— PMO India (@PMOIndia) March 6, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.