ಮೈಸೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮೈಸೂರು ವಿಶ್ವವಿದ್ಯಾನಿಲಯ ಮತ್ತು ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆಯ ಕಾಸ್ಮೋಲಜಿ ಶಿಕ್ಷಣ ಮತ್ತು ಸಂಶೋಧನಾ ತರಬೇತಿ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಅವರು, ಭಾರತ ವಿಶ್ವಗುರುವಾಗಬೇಕು ಎನ್ನುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಮುಂದಿಡುತ್ತಿದೆ ಎಂದು ಹೇಳಿದರು.
“ವಿಜ್ಞಾನ ಕ್ಷೇತ್ರದಲ್ಲಿ ಮಾಹಿತಿ ಇದ್ದರೆ ಸಾಕಾಗುವುದಿಲ್ಲ, ಅದನ್ನು ಸಮರ್ಪಕವಾದ ರೀತಿಯಲ್ಲಿ ಹೇಗೆ ಬಳಸಿಕೊಳ್ಳಬೇಕು ಎಂಬುದನ್ನು ಕೂಡ ತಿಳಿದಿರಬೇಕು ಎಂದು ಸಲಹೆ ನೀಡಿದರು. ಕಾಸ್ಮೋಲಜಿ ಶಿಕ್ಷಣ ಮತ್ತು ಸಂಶೋಧನಾ ತರಬೇತಿ ಕೇಂದ್ರ ತೆರೆಯಲು ಮೈಸೂರು ವಿವಿಯವರು ಸರಿಯಾದ ಜಾಗವನ್ನೇ ನೀಡಿದ್ದಾರೆ. ಸರ್ಕಾರದ ವಿವಿಧ ಇಲಾಖೆಗಳು ಒಟ್ಟಿಗೆ ಸಹಭಾಗಿತ್ವದಿಂದ ಕೆಲಸ ಮಾಡಿದರೆ ಇಂತಹ ಒಂದು ದೊಡ್ಡ ಯೋಜನೆ ಕಾರ್ಯಗತವಾಗುತ್ತದೆ” ಎಂದಿದ್ದಾರೆ.
” ಮೈಸೂರು ವಿವಿ ದೇಶದಲ್ಲೇ ವಿಶೇಷವಾಗಿದ್ದು, ಈ ವಿವಿ ಬಗ್ಗೆ ನನಗೆ ಹೆಮ್ಮೆ ಇದೆ. ಹಲವು ಸಾಧನೆಗಳನ್ನು ಈ ವಿವಿ ಮಾಡಿದೆ. ನಾನು ಕರ್ನಾಟಕದ ರಾಜ್ಯಸಭೆ ಸದಸ್ಯೆಯಾಗಿದ್ದೇನೆ. ಮುಂದಿನ ಪೀಳಿಗೆಗೆ ನಾವು ಏನಾದರೂ ಮಾಡಬೇಕಿದೆ” ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.