ನವದೆಹಲಿ: ಇನ್ನು ಮುಂದೆ ಎಲ್ಲಾ ಖಾಸಗಿ ವೈದ್ಯಕೀಯ ಕಾಲೇಜುಗಳ 50% ಸೀಟುಗಳ ಶುಲ್ಕಗಳನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಶುಲ್ಕಕ್ಕೆ ಸಮಾನಾಗಿ ವಿಧಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಭಾರತದಲ್ಲಿ ಖಾಸಗಿ ಕಾಲೇಜುಗಳಲ್ಲಿ ವೈದ್ಯಕೀಯ ಅಧ್ಯಯನವನ್ನು ಮುಂದುವರಿಸಲು ಸಾಧ್ಯವಾಗದ “ಬಡ ಮತ್ತು ಮಧ್ಯಮ ವರ್ಗದ” ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಇಂದು ಪಿಎಂಒ ಹೊರಡಿಸಿದ ಹೇಳಿಕೆಯ ಪ್ರಕಾರ, ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿನ ಅರ್ಧದಷ್ಟು ಸೀಟುಗಳ ಶುಲ್ಕವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಶುಲ್ಕಗಳಿಗೆ ಸಮಾನವಾಗಿ ವಿಧಿಸಲು ನಾವು ನಿರ್ಧರಿಸಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಇದಕ್ಕೂ ಮೊದಲು, ಫೆಬ್ರವರಿ 3 ರಂದು, ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ಕಚೇರಿ ಮೆಮೊರಾಂಡಮ್ ಅನ್ನು ಹೊರಡಿಸಿ, ನಿರ್ದಿಷ್ಟ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶಗಳಲ್ಲಿ ಖಾಸಗಿ ವೈದ್ಯಕೀಯ ಕಾಲೇಜುಗಳು ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿನ ಶೇ 50 ರಷ್ಟು ಸೀಟುಗಳಿಗೆ ಶುಲ್ಕ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಶುಲ್ಕಕ್ಕೆ ಸಮಾನವಾಗಿರಬೇಕು ಎಂದು ನಿರ್ಧರಿಸಲಾಗಿದೆ ಎಂದು ಹೇಳಿದೆ.
ಈ ನಿರ್ಧಾರದಿಂದ ಬಡ ಮತ್ತು ಮಧ್ಯವರ್ಗದ ವಿದ್ಯಾರ್ಥಿಗಳಿಗೆ ಸಾಕಷ್ಟು ಪ್ರಯೋಜನ ನೀಡಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.