ನವದೆಹಲಿ: ಇಂದು ವಿಶ್ವ ಮಹಿಳಾ ದಿನಾಚರಣೆ. ಈ ಹಿನ್ನೆಲೆಯಲ್ಲಿ ಸರಣಿ ಟ್ವಿಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ನಾರಿಶಕ್ತಿಗೆ ಸೆಲ್ಯೂಟ್ ಎಂದಿದ್ದಾರೆ.
“ಮಹಿಳಾ ದಿನದಂದು, ನಮ್ಮ ನಾರಿ ಶಕ್ತಿ ಮತ್ತು ವಿವಿಧ ಕ್ಷೇತ್ರಗಳಲ್ಲಿ ಅವರ ಸಾಧನೆಗೆ ನನ್ನ ಸೆಲ್ಯೂಟ್ . ಭಾರತ ಸರ್ಕಾರವು ಮಹಿಳೆಯರ ಘನತೆ ಮತ್ತು ಅವಕಾಶಕ್ಕೆ ಒತ್ತು ನೀಡುತ್ತಿದ್ದು, ವಿವಿಧ ಯೋಜನೆಗಳ ಮೂಲಕ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತದೆ” ಎಂದಿದ್ದಾರೆ.
“ಆರ್ಥಿಕ ಸೇರ್ಪಡೆಯಿಂದ ಸಾಮಾಜಿಕ ಭದ್ರತೆ, ಗುಣಮಟ್ಟದ ಆರೋಗ್ಯ ಸೇವೆ, ವಸತಿ, ಶಿಕ್ಷಣದಿಂದ ಉದ್ಯಮಶೀಲತೆ, ಭಾರತದ ಅಭಿವೃದ್ಧಿ ಪಯಣದಲ್ಲಿ ನಮ್ಮ ನಾರಿ ಶಕ್ತಿಯನ್ನು ಮುಂಚೂಣಿಯಲ್ಲಿಡಲು ಹಲವು ಪ್ರಯತ್ನಗಳನ್ನು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಈ ಪ್ರಯತ್ನಗಳು ಇನ್ನೂ ಹೆಚ್ಚಿನ ಹುರುಪಿನಿಂದ ಮುಂದುವರಿಯಲಿವೆ” ಎಂದಿದ್ದಾರೆ.
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ಸಬಲೀಕರಣಕ್ಕೆ ವಿವಿಧ ಗಣ್ಯರ ಕೊಡುಗೆಯನ್ನು ಗುರುತಿಸಲು ಕಾರ್ಯಕ್ರಮ ಆಯೋಜಿಸಲಾಗಿದೆ. ಕಚ್ನ ಧೋರ್ಡೊದಲ್ಲಿ ನಡೆಯುವ ಸೆಮಿನಾರ್ನಲ್ಲಿ 500ಕ್ಕೂ ಹೆಚ್ಚು ಮಹಿಳಾ ಸಾಧಕರು ಭಾಗವಹಿಸಲಿದ್ದಾರೆ. ಸೆಮಿನಾರ್ನಲ್ಲಿ ಸಂಸ್ಕೃತಿ, ಧರ್ಮ, ಭದ್ರತೆ, ಸಾಮಾಜಿಕ ಸ್ಥಾನಮಾನ ಮತ್ತು ಭಾರತ ಸಂಸ್ಕೃತಿಯಲ್ಲಿ ಮಹಿಳೆಯರ ಪಾತ್ರದ ಕುರಿತು ಸಂವಾದಗಳನ್ನು ನಡೆಸಲಾಗುತ್ತಿದೆ. ಇದರ ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಲ್ಯಾಣ ಯೋಜನೆಗಳ ಜೊತೆಗೆ ಮಹಿಳೆಯರ ಸಾಧನೆಗಳ ಬಗ್ಗೆ ಚರ್ಚೆ ನಡೆಯಲಿದೆ.
On Women’s Day, I salute our Nari Shakti and their accomplishments in diverse fields. The Government of India will keep focusing on women empowerment through its various schemes with an emphasis on dignity as well as opportunity.
— Narendra Modi (@narendramodi) March 8, 2022
From financial inclusion to social security, quality healthcare to housing, education to entrepreneurship, many efforts have been made to put our Nari Shakti at the forefront of India’s development journey. These efforts will continue with even greater vigour in the coming times.
— Narendra Modi (@narendramodi) March 8, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.