ನವದೆಹಲಿ: ಮಾರ್ಚ್ 14 ರಿಂದ ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಭಾಗ ಆರಂಭವಾಗಲಿದೆ.
ಈ ಎರಡನೇ ಹಂತ ಮುಂದಿನ ತಿಂಗಳ 8 ರಂದು ಮುಕ್ತಾಯಗೊಳ್ಳಲಿದೆ. ಲೋಕಸಭೆ ಮತ್ತು ರಾಜ್ಯಸಭೆಗಳು ಎರಡೂ ಪಾಳಿಯಲ್ಲಿ ಕೆಲಸ ಮಾಡುವ ಬದಲು ಬೆಳಿಗ್ಗೆ 11 ಗಂಟೆಯಿಂದ ಕಲಾಪ ನಡೆಸಲಿವೆ. ಕೋವಿಡ್ ಕಾರಣ ಕಳೆದ ಬಾರಿ ಸಂಸತ್ತು ಎರಡು ಪಾಳಿಯಲ್ಲಿ ಕಾರ್ಯನಿರ್ವಹಣೆ ಮಾಡಿತ್ತು.
ದೇಶದಲ್ಲಿ ಕೋವಿಡ್-19 ಪ್ರಕರಣಗಳು ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಬೆಳಿಗ್ಗೆ 11 ಗಂಟೆಗೆ ಕಲಾಪ ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆದರೆ, ಎರಡೂ ಸದನಗಳು ತಮ್ಮ ಚೇಂಬರ್ಗಳು ಮತ್ತು ಗ್ಯಾಲರಿಗಳನ್ನು ಬಳಸುವುದನ್ನು ಮುಂದುವರಿಸುತ್ತವೆ ಎಂದು ಮೂಲಗಳು ತಿಳಿಸಿವೆ.
ಸಾಂಕ್ರಾಮಿಕ ರೋಗದ ಮೂರನೇ ಅಲೆ ದೃಷ್ಟಿಯಿಂದ, ಬಜೆಟ್ ಅಧಿವೇಶನದ ಮೊದಲ ಹಂತದಲ್ಲಿ ಉಭಯ ಸದನಗಳು ಪಾಳಿಯಲ್ಲಿ ಕೆಲಸ ಮಾಡುತ್ತಿದ್ದವು.
ಬಜೆಟ್ ಅಧಿವೇಶನದ ಎರಡನೇ ಭಾಗದಲ್ಲಿ ಮಹತ್ವದ ವಿಷಯಗಳು ಚರ್ಚೆಗೆ ಬರುವ ನಿರೀಕ್ಷೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.