News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಯುಪಿಯಲ್ಲಿ ಇತಿಹಾಸ ಸೃಷ್ಟಿಸಿದ ಬಿಜೆಪಿ !  ಮರು ಆಯ್ಕೆಯಾದ ಮೊದಲ ಸಿಎಂ ಯೋಗಿ 

ಲಕ್ನೋ: ಉತ್ತರಪ್ರದೇಶದಲ್ಲಿ ಬಿಜೆಪಿ ಇತಿಹಾಸ ನಿರ್ಮಾಣ ಮಾಡಿದೆ. 1985 ರಿಂದ ಮೊದಲ ಬಾರಿಗೆ ಮರುಚುನಾಯಿಸಲ್ಪಟ್ಟ ಪಕ್ಷ ಎಂಬ ದಾಖಲೆ ನಿರ್ಮಿಸಿದೆ. ಭಾರತದ ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಮೂಲಕ
ಮಹತ್ವದ ಸಾಧನೆ ಮಾಡಿದೆ.

ಉತ್ತರ ಪ್ರದೇಶದಲ್ಲಿನ ಮತಗಳ ಎಣಿಕೆಯ ಆರಂಭಿಕ ಸುತ್ತಿನಲ್ಲೇ ಬಿಜೆಪಿ ನೇತೃತ್ವದ ಮೈತ್ರಿಕೂಟವು ಅದರ ಸಮೀಪದ ಪ್ರತಿಸ್ಪರ್ಧಿ ಸಮಾಜವಾದಿ ಪಕ್ಷದ ನೇತೃತ್ವದ ಮೈತ್ರಿಕೂಟಕ್ಕಿಂತ 274 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿತ್ತು.

ಉತ್ತರ ಪ್ರದೇಶದ 403 ವಿಧಾನಸಭಾ ಸ್ಥಾನಗಳಿಗೆ ನಡೆದ ಮತ ಎಣಿಕೆ ಗುರುವಾರ ಬೆಳಗ್ಗೆ ಆರಂಭಗೊಂಡಿದ್ದು, ಎಲ್ಲಾ ಎಣಿಕೆ ಕೇಂದ್ರಗಳಲ್ಲಿ ಮೂರು ಹಂತದ ಭದ್ರತೆ ಹಾಗೂ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಮೂರು ದಶಕಗಳಲ್ಲಿ ಯುಪಿಯಲ್ಲಿ ಎರಡನೇ ಅವಧಿಗೆ ಪಕ್ಷವೊಂದು ಮರುಚುನಾವಣೆಗೊಳ್ಳುವುದರೊಂದಿಗೆ  ದಾಖಲೆ ಬರೆದಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top