ಬೆಂಗಳೂರು: ಚುನಾವಣಾ ಸಮಯದಲ್ಲಿ ಆಡಳಿತ ಪಕ್ಷಗಳು ಸಾಮಾನ್ಯವಾಗಿ ಎದುರಿಸುವ ಆಡಳಿತ ವಿರೋಧಿ ಅಲೆ ಬಿಜೆಪಿ ಪಕ್ಷದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಐದು ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.
“ಬಿಜೆಪಿಗೆ ಮಾತ್ರ ಮತ್ತೆ ಮತ್ತೆ ಅಧಿಕಾರಕ್ಕೆ ಬರುವ ಸಾಮರ್ಥ್ಯವಿದೆ ಮತ್ತು ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶಗಳಲ್ಲಿ ಅದು ಮತ್ತೊಮ್ಮೆ ಸಾಬೀತಾಗಿದೆ” ಎಂದು ಅವರು ಶುಕ್ರವಾರ ವಿಧಾನಸಭೆಯಲ್ಲಿ ಅವರು ಹೇಳಿದ್ದಾರೆ.
2023ರ ಚುನಾವಣೆಯ ನಂತರ ಕರ್ನಾಟಕದಲ್ಲಿ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಬೊಮ್ಮಾಯಿ, ಮುಂದಿನ ಚುನಾವಣೆಯಲ್ಲಿ ಪಕ್ಷ 140 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಮತ್ತು ಕಾಂಗ್ರೆಸ್ ಮತ್ತೆ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳಬೇಕಾಗುತ್ತದೆ ಎಂದು ಹೇಳಿದರು.
ಕಳೆದ 70 ವರ್ಷಗಳಲ್ಲಿ ಜನರು ಎಲ್ಲಾ ರಾಜಕೀಯ ಪಕ್ಷಗಳನ್ನು ನೋಡಿದ್ದಾರೆ. ಬಿಜೆಪಿಯ ಕೆಲಸಗಳನ್ನು ಜನ ಮೆಚ್ಚುತ್ತಿದ್ದಾರೆ” ಎಂದು ಸಿಎಂ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.