ನವದೆಹಲಿ: ಕೀವ್-ಮಾಸ್ಕೋ ಸಂಘರ್ಷದ ಹಿನ್ನೆಲೆಯಲ್ಲಿ ಉಕ್ರೇನ್ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯನ್ನು ತಾತ್ಕಾಲಿಕವಾಗಿ ಪೋಲೆಂಡ್ಗೆ ಸ್ಥಳಾಂತರಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಭಾನುವಾರ ತಿಳಿಸಿದೆ.
“ದೇಶದ ಪಶ್ಚಿಮ ಭಾಗಗಳಲ್ಲಿನ ದಾಳಿಗಳು ಸೇರಿದಂತೆ ಉಕ್ರೇನ್ನಲ್ಲಿ ವೇಗವಾಗಿ ಕ್ಷೀಣಿಸುತ್ತಿರುವ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಉಕ್ರೇನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯನ್ನು ತಾತ್ಕಾಲಿಕವಾಗಿ ಪೋಲೆಂಡ್ಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ” ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
“ಮುಂದಿನ ಬೆಳವಣಿಗೆಗಳ ಆಧಾರದಲ್ಲಿ ಪರಿಸ್ಥಿತಿಯನ್ನು ಮರು ಮೌಲ್ಯಮಾಪನ ಮಾಡಲಾಗುವುದು” ಎಂದಿದೆ.
ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಭದ್ರತಾ ಸನ್ನದ್ಧತೆ ಮತ್ತು ಉಕ್ರೇನ್ನಲ್ಲಿ ನಡೆಯುತ್ತಿರುವ ಸಂಘರ್ಷದ ಸಂದರ್ಭದಲ್ಲಿ ಚಾಲ್ತಿಯಲ್ಲಿರುವ ಜಾಗತಿಕ ಸನ್ನಿವೇಶವನ್ನು ಪರಿಶೀಲಿಸಲು ನಿನ್ನೆ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಸಭೆಯಲ್ಲಿ, ಅವರು ಉಕ್ರೇನ್ನಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ವಿವರಿಸಿದರು, ಭಾರತೀಯ ಪ್ರಜೆಗಳನ್ನು, ಭಾರತದ ನೆರೆಯ ರಾಷ್ಟ್ರಗಳ ಕೆಲವು ನಾಗರಿಕರನ್ನು ಯುದ್ಧ ಪೀಡಿತ ರಾಷ್ಟ್ರದಿಂದ ಸ್ಥಳಾಂತರಿಸಲು ಆಪರೇಷನ್ ಗಂಗಾ ವಿವರಗಳನ್ನು ಒಳಗೊಂಡಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.