ಬೆಂಗಳೂರು: ‘ದಿ ಕಾಶ್ಮೀರಿ ಫೈಲ್ಸ್’ಸಿನಿಮಾ ದೇಶಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕಾಶ್ಮೀರಿ ಪಂಡಿತರು ತಮ್ಮ ನೆಲದಲ್ಲಿ ಅನುಭವಿಸಿದ ಕಿರುಕುಳ, ಹಿಂಸಾಚಾರದ ಕಥಾಹಂದರವನ್ನು ಹೊಂದಿರುವ ಈ ಸಿನಿಮಾ ಸಂಚಲನವನ್ನೇ ಸೃಷ್ಟಿ ಮಾಡಿದೆ. ಮಾತ್ರವಲ್ಲದೆ ಬಾಕ್ಸ್ ಆಫೀಸ್ ನಲ್ಲೂ ಉತ್ತಮ ಗಳಿಕೆಯನ್ನು ಕಾಣುತ್ತಿದೆ.
ಈ ಸಿನಿಮಾ ಮಾರ್ಚ್ 11ರಂದು ದೇಶವ್ಯಾಪಿಯಾಗಿ 630 ಪರದೆಗಳಲ್ಲಿ ಬಿಡುಗಡೆಯನ್ನು ಕಂಡಿತ್ತು. ಆದರೆ ಕೇವಲ ಎರಡು ದಿನಗಳಲ್ಲಿ ಎರಡು ಸಾವಿರಕ್ಕೂ ಅಧಿಕ ಪರದೆಗಳಲ್ಲಿ ಪ್ರದರ್ಶನವನ್ನು ಕಾಣುತ್ತಿದೆ. ಹೆಚ್ಚಿನ ಸಂಖ್ಯೆಯ ಜನರು ಸಿನಿಮಾ ವೀಕ್ಷಣೆಗಾಗಿ ಥಿಯೇಟರ್ಗೆ ಆಗಮಿಸುತ್ತಿದ್ದಾರೆ.
ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಟ್ವೀಟ್ ಮಾಡಿ, ಚಿತ್ರ ಮೂರು ದಿನಗಳಲ್ಲಿ ಒಟ್ಟು 31.06 ಕೋಟಿ ರೂಪಾಯಿ ಗಳಿಕೆಯನ್ನು ಕಂಡಿದೆ ಎಂದು ಹೇಳಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಸಿನಿಮಾಗೆ ಉತ್ತಮ ವಿಮರ್ಶೆಗಳು ವ್ಯಕ್ತವಾಗುತ್ತಿವೆ. ಹೀಗಾಗಿ ಹೆಚ್ಚಿನ ಸಂಖ್ಯೆಯ ಜನರು ಸಿನಿಮಾ ನೋಡಲು ಆಸಕ್ತಿ ವಹಿಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.