ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ. ಹಿಜಾಬ್ ಧರಿಸುವುದು ಅಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ತೀರ್ಪಿನಲ್ಲಿ ಸ್ಪಷ್ಟವಾಗಿ ಹೇಳಿದೆ. ಅಲ್ಲದೆ ಕಾಲೇಜು ತರಗತಿಗಳಲ್ಲಿ ಹಿಜಾಬ್ ನಿರ್ಬಂಧಿಸಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಎತ್ತಿ ಹಿಡಿದಿದೆ.
ಹಿಜಾಬ್ ಅಗತ್ಯ ಧಾರ್ಮಿಕ ಆಚರಣೆ ಅಲ್ಲ. ಅಂತೆ ಹಿಜಾಬ್ ಅಗತ್ಯ ಆಚರಣೆ ಎಂಬ ಉಲ್ಲೇಖಕ್ಕೆ ಕುರಾನಲ್ಲಿ ಯಾವುದೇ ಆಧಾರವಿಲ್ಲ ಎಂದು ನ್ಯಾಯಪೀಠ ಹೇಳಿದೆ.
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯ ಋತುರಾಜ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಜೈಬುನ್ನೀಸ ಮೊಹಿಯುದ್ದಿನ್ ಖಾಜಿ ಅವರನ್ನು ಒಳಗೊಂಡ ನ್ಯಾಯಪೀಠ ತೀರ್ಪು ಪ್ರಕಟಿಸಿದೆ.
ಕಾಲೇಜು ತರಗತಿಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂಬ ಸಾರ್ವಜನಿಕ ಹಿತಾಸಕ್ತಿ ಮನವಿಗಳನ್ನು ಹೈಕೋರ್ಟ್ ಸಾರಾಸಗಟಾಗಿ ತಿರಸ್ಕರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.