ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ಪ್ರಕಟವಾಗಿದೆ. ಹಿಜಾಬ್ ನಿರ್ಬಂಧವನ್ನು ನ್ಯಾಯಾಲಯ ಎತ್ತಿ ಹಿಡಿದಿದೆ. ತೀರ್ಪು ಪಾಲನೇ ಮಾಡದಿದ್ದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ನ್ಯಾಯಾಲಯದ ತೀರ್ಪನ್ನು ನಾನು ಸ್ವಾಗತಿಸುತ್ತೇನೆ. ವಿದ್ಯಾರ್ಥಿಗಳು ಮತ್ತು ಪೋಷಕರು ಈ ತೀರ್ಪನ್ನು ಪಾಲನೆ ಮಾಡಲೇ ಬೇಕು ಮತ್ತು ಶಾಂತಿ-ಸುವ್ಯವಸ್ಥೆ ಕಾಪಾಡಬೇಕು ಎಂದು ಮನವಿ ಮಾಡುತ್ತೇನೆ ಎಂದಿದ್ದಾರೆ.
ಎಲ್ಲಾ ಸಮುದಾಯದ ಜನರಿಗೆ, ಸಮಸ್ತ ಜನರಿಗೆ ಶಾಂತಿ ಕಾಪಾಡಿ, ನ್ಯಾಯಾಲಯದ ತೀರ್ಪಿನ ಅನ್ವಯ ಮಕ್ಕಳಿಗೆ ಶಿಕ್ಷಣ ಒದಗಿಸಲು ಮುಂದಾಗೋಣ. ತೀರ್ಪನ್ನು ಎಲ್ಲರೂ ಪಾಲಿಸೋಣ ಎಂದಿದ್ದಾರೆ.
ಶಿಕ್ಷಣ ಸಚಿವ ಬಿ.ನಾಗೇಶ್ ಅವರು ಕೂಡ ಟ್ವಿಟ್ ಮಾಡಿ, “ಶಾಲೆ-ಕಾಲೇಜುಗಳಲ್ಲಿ ಸಮವಸ್ತ್ರ ನಿಯಮ ವಿಚಾರವಾಗಿ ಕರ್ನಾಟಕ ಹೈ ಕೋರ್ಟ್ನ ಐತಿಹಾಸಿಕ ತೀರ್ಪನ್ನು ಸ್ವಾಗತಿಸುತ್ತೇನೆ. ಈ ನೆಲ, ನೆಲದ ಕಾನೂನು ಅಂತಿಮ” ಎಂದಿದ್ದಾರೆ.
ಶಾಲೆ-ಕಾಲೇಜುಗಳಲ್ಲಿ ಸಮವಸ್ತ್ರ ನಿಯಮ ವಿಚಾರವಾಗಿ ಕರ್ನಾಟಕ ಹೈ ಕೋರ್ಟ್ನ ಐತಿಹಾಸಿಕ ತೀರ್ಪನ್ನು ಸ್ವಾಗತಿಸುತ್ತೇನೆ.
ಈ ನೆಲ, ನೆಲದ ಕಾನೂನು ಅಂತಿಮ.I welcome Landmark judgement of Hon'ble Karnataka High Court on School/College uniform Rules.
It reiterated that the law of the land is above everything.— B.C Nagesh (@BCNagesh_bjp) March 15, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.