ಖಟ್ಕರ್ ಕಲಾನ್: ಆಮ್ ಆದ್ಮಿ ಪಕ್ಷದ ನಾಯಕ ಭಗವಂತ್ ಮಾನ್ ಅವರು ಪಂಜಾಬ್ನ ನೂತನ ಮುಖ್ಯಮಂತ್ರಿಯಾಗಿ ಬುಧವಾರ ಭಗತ್ ಸಿಂಗ್ ಗ್ರಾಮ ಖಟ್ಕರ್ ಕಲಾನ್ ನಲ್ಲಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು ಅದರ ಎಲ್ಲಾ ಶಾಸಕರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ನಿರ್ಗಮಿತ ಸಿಎಂ ಚರಣ್ ಜಿತ್ ಸಿಂಗ್ ಚನ್ನಿ ಅವರಿಗೆ ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನ ಇರಲಿಲ್ಲ.
ಬುಧವಾರ ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಮುನ್ನ, ಎಎಪಿ ನಾಯಕ ಭಗವಂತ್ ಮಾನ್, ಭಗತ್ ಸಿಂಗ್ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಅವರ ಕನಸುಗಳನ್ನು ನನಸಾಗಿಸಲು ರಾಜ್ಯದ ಜನರು ತಮ್ಮೊಂದಿಗೆ ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂದು ಹೇಳಿದ್ದರು.
ಪಂಜಾಬ್ನ ಶಹೀದ್ ಭಗತ್ ಸಿಂಗ್ (ಎಸ್ಬಿಎಸ್) ನಗರ ಜಿಲ್ಲೆಯ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಪೂರ್ವಜರ ಗ್ರಾಮವಾದ ಖಟ್ಕರ್ ಕಲಾನ್ನಲ್ಲಿ ಮಾನ್ ಅವರ ಪ್ರಮಾಣವಚನ ಸಮಾರಂಭ ನಡೆದಿದೆ.
ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷವನ್ನು ಸೋಲಿಸಿ ಎಎಪಿ ವಿಜಯ ಸಾಧಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.