ನವದೆಹಲಿ: ಭಾರತದ ಮಹಾಕಾವ್ಯಗಳಾದ ರಾಮಾಯಣ ಮತ್ತು ಮಹಾಭಾರತದ ಪೋಸ್ಟಲ್ ಸ್ಟ್ಯಾಂಪ್ಗಳನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಟೆಲಿಕಾಂ ಸಚಿವ ರವಿಶಂಕರ್ ಪ್ರಸಾದ್, ‘ರಾಮಾಯಣ, ಮಹಾಭಾರತಗಳ ಪೋಸ್ಟಲ್ ಸ್ಟ್ಯಾಂಪ್ ಬಿಡುಗಡೆ ಮಾಡುವ ಸಂಬಂಧ ಪೋಸ್ಟಲ್ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಇದು ಭಾರತ ದೇಶದ ಮಹಾನ್ ಸಾಂಸ್ಕೃತಿಕ ಪರಿಕಲ್ಪನೆ, ಸಂಸ್ಕೃತಿಗೆ ಗೌರವ ಸಲ್ಲಿಸುವುದಾಗಿದೆ’ ಎಂದಿದ್ದಾರೆ.
ಮಹಿಳಾ ಸಬಲೀಕರಣದ ಅಂಗವಾಗಿ ಪೋಸ್ಟಲ್ ಸ್ಟ್ಯಾಂಪ್ ಬಿಡುಗಡೆ ಮಾಡಿದ ವೇಳೆ ಅವರು ಈ ಘೋಷಣೆ ಮಾಡಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರರಾದ ಬಟುಕೇಶ್ವರ್ ದತ್ತ್, ಸುಖ್ದೇವ್, ಅಶ್ಫಾಖುಲ್ಲಾಖಾನ್, ಸಂಗೀತ ಕ್ಷೇತ್ರದ ದಿಗ್ಗಜರಾದ ಕಿಶೋರ್ ಕುಮಾರ್, ಮಹಮ್ಮದ್ ರಫಿ ಅವರುಗಳ ಪೋಸ್ಟಲ್ ಸ್ಟ್ಯಾಂಪನ್ನೂ ಬಿಡುಗಡೆ ಮಾಡಲಾಗುತ್ತಿದೆ.
ಸ್ಮರಣಾರ್ಥ ಮಾತ್ರವಲ್ಲದೇ ಈ ಸ್ಟ್ಯಾಂಪ್ಗಳನ್ನು ನಿತ್ಯ ಬಳಕೆಗೆ ಬಿಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.