ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ನಿರ್ಮೂಲನೆ ಮಾಡುವ ಕಾರ್ಯವನ್ನು ಭದ್ರತಾ ಪಡೆಗಳು ಸಕ್ರಿಯವಾಗಿ ಮಾಡುತ್ತಲೇ ಬಂದಿವೆ. ಕಳೆದ ವರ್ಷ ಮಾರ್ಚ್ 1ರಿಂದ 2022ರ ಮಾರ್ಚ್ 16 ರವರೆಗೆ ಸಿಆರ್ಪಿಎಫ್ ಯೋಧರು 175 ಭಯೋತ್ಪಾದಕರನ್ನು ಹತ್ಯೆಮಾಡಿದ್ದಾರೆ.
ಈ ಬಗ್ಗೆ ಸಿಆರ್ಪಿಎಫ್ ಮಹಾನಿರ್ದೇಶಕ ಕುಲದೀಪ್ ಸಿಂಗ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಕಳೆದ ವರ್ಷದ ಮಾರ್ಚ್ ನಿಂದ ಈ ವರ್ಷದ ಮಾರ್ಚ್ 16 ರವರೆಗೆ ಸಿಆರ್ಪಿಎಫ್ 175 ಉಗ್ರರನ್ನು ಸಂಹರಿಸಿದೆ ಮತ್ತು ಇದೇ ಅವಧಿಯಲ್ಲಿ 183 ಉಗ್ರರನ್ನು ಬಂಧಿಸಲಾಗಿದೆ ಎಂದಿದ್ದಾರೆ.
ಎಡಪಂಥೀಯ ಉಗ್ರವಾದ ಪೀಡಿತ ರಾಜ್ಯಗಳಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ 19ಮಂದಿ ನಕ್ಸಲರನ್ನು ಹತ್ಯೆ ಮಾಡಲಾಗಿದೆ ಮತ್ತು 699 ಜನರನ್ನು ಬಂಧಿಸಲಾಗಿದೆ ಎಂದಿದ್ದಾರೆ.
ಜಮ್ಮುವಿನ ಎಎ ಕ್ರೀಡಾಂಗಣದಲ್ಲಿ ಶನಿವಾರ ಸಿಆರ್ಪಿಎಫ್ 83ನೇ ಸ್ಥಾಪನಾ ದಿನದ ಪೆರೇಡ್ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.