ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹೋಳಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ ಮತ್ತು ಹಬ್ಬವು ಎಲ್ಲರ ಜೀವನದಲ್ಲಿ ಸಂತೋಷದ ಬಣ್ಣಗಳನ್ನು ತುಂಬಲಿ ಎಂದು ಹಾರೈಸಿದ್ದಾರೆ.
‘ನಿಮ್ಮೆಲ್ಲರಿಗೂ ಹೋಳಿ ಹಬ್ಬದ ಶುಭಾಶಯಗಳು. ಪರಸ್ಪರ ಪ್ರೀತಿ, ವಾತ್ಸಲ್ಯ ಮತ್ತು ಸಹೋದರತ್ವದ ಸಂಕೇತವಾಗಿರುವ ಈ ಬಣ್ಣಗಳ ಹಬ್ಬವು ನಿಮ್ಮ ಜೀವನದಲ್ಲಿ ಸಂತೋಷದ ಪ್ರತಿಯೊಂದು ಬಣ್ಣವನ್ನು ತುಂಬಲಿ” ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
आप सभी को होली की हार्दिक शुभकामनाएं। आपसी प्रेम, स्नेह और भाईचारे का प्रतीक यह रंगोत्सव आप सभी के जीवन में खुशियों का हर रंग लेकर आए।
— Narendra Modi (@narendramodi) March 18, 2022
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಕೂಡ ಹೋಳಿ ಹಬ್ಬದ ಸಂದರ್ಭದಲ್ಲಿ ಜನರಿಗೆ ಶುಭಾಶಯ ಕೋರಿದರು.
ರಾಷ್ಟ್ರಪತಿ ಕೋವಿಂದ್ ಅವರು ತಮ್ಮ ಸಂದೇಶದಲ್ಲಿ, “ಹೋಳಿ ಹಬ್ಬದ ಶುಭ ಸಂದರ್ಭದಲ್ಲಿ, ದೇಶ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ನಮ್ಮ ಎಲ್ಲಾ ಸಹ ಭಾರತೀಯರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ” ಎಂದು ಹೇಳಿದ್ದಾರೆ.
“ಹೋಳಿ ಬಣ್ಣಗಳ ಹಬ್ಬ, ವಸಂತ ಋತುವಿನ ಆರಂಭವನ್ನು ಸೂಚಿಸುತ್ತದೆ, ನಮ್ಮ ಜೀವನದಲ್ಲಿ ಸಂತೋಷ ಮತ್ತು ಉತ್ಸಾಹವನ್ನು ತರುತ್ತದೆ. ಈ ಹಬ್ಬವು ಸಾಮಾಜಿಕ ಸಾಮರಸ್ಯ ಮತ್ತು ಒಗ್ಗಟ್ಟಿನ ಜೀವಂತ ಉದಾಹರಣೆಯಾಗಿದೆ. ಉತ್ಸಾಹ ದೊಂದಿಗೆ ಎಲ್ಲಾ ವಯಸ್ಸಿನ ಮತ್ತು ಎಲ್ಲಾ ಹಿನ್ನೆಲೆಯ ಮಕ್ಕಳು, ಯುವಕರು, ಪುರುಷರು ಮತ್ತು ಮಹಿಳೆಯರು ಈ ಹಬ್ಬವನ್ನು ಆಚರಿಸುತ್ತಾರೆ” ಅವರು ಹೇಳಿದರು.
होली के पावन अवसर पर सभी देशवासियों को हार्दिक बधाई एवं शुभकामनाएं।
रंगों का पर्व होली, सामुदायिक सद्भाव और मेल-मिलाप का जीवंत उदाहरण है। यह वसंत ऋतु के आगमन का शुभ समाचार लेकर आता है।
मेरी कामना है कि यह त्योहार सभी देशवासियों के जीवन में आनंद, उमंग और नई ऊर्जा का संचार करे।
— President of India (@rashtrapatibhvn) March 18, 2022
“ಈ ಬಣ್ಣದ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಕಾರಾತ್ಮಕ ಶಕ್ತಿಯನ್ನು ತುಂಬುತ್ತದೆ ಮತ್ತು ರಾಷ್ಟ್ರ ನಿರ್ಮಾಣದ ಉತ್ಸಾಹವನ್ನು ಬಲಪಡಿಸುತ್ತದೆ ಎಂದು ನಾನು ಬಯಸುತ್ತೇನೆ” ಎಂದಿದ್ದಾರೆ.
ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಬಣ್ಣಗಳ ಹಬ್ಬವಾದ ಹೋಳಿ ಹಬ್ಬದ ಶುಭ ಸಂದರ್ಭದಲ್ಲಿ ಜನರಿಗೆ ಶುಭಾಶಯಗಳು ಮತ್ತು ಶುಭ ಹಾರೈಕೆಗಳನ್ನು ನೀಡಿದ್ದಾರೆ.
“ದೇಶದಾದ್ಯಂತ ಸಾಂಪ್ರದಾಯಿಕ ಉತ್ಸಾಹ ಮತ್ತು ಸ್ಫೂರ್ತಿಯೊಂದಿಗೆ ಹೋಳಿ ಹಬ್ಬವನ್ನು ಆಚರಿಸಲಾಗುತ್ತದೆ, ಹೋಳಿಯು ಕುಟುಂಬ ಮತ್ತು ಸ್ನೇಹಿತರು ಒಟ್ಟಿಗೆ ಸೇರಲು ಮತ್ತು ಜೀವನದ ಸ್ವಾಭಾವಿಕ, ಸಂತೋಷದಾಯಕ ಆಚರಣೆಯ ಉತ್ಸಾಹ ಆನಂದಿಸುವ ಸಮಯವಾಗಿದೆ” ಎಂದಿದ್ದಾರೆ.
On the auspicious occasion of #Holi, let us strive to strengthen the bonds of friendship and amity that hold our society together. May this festival bring peace, harmony, prosperity and happiness in our lives.
— Vice-President of India (@VPIndia) March 18, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.