ನವದೆಹಲಿ: ಕೊರೋನಾವೈರಸ್ ವಿರುದ್ಧದ ಹೋರಾಟದಲ್ಲಿ ಭಾರತ ಮಹತ್ವದ ಮೈಲಿಗಲ್ಲು ಸಾಧಿಸುತ್ತಿದೆ. ಈಗಾಗಲೇ ತನ್ನ ಬಹುಪಾಲು ವಯಸ್ಕ ಜನಸಂಖ್ಯೆಗೆ ಕೋವಿಡ್-19 ವಿರುದ್ಧ ಲಸಿಕೆ ನೀಡಿದ್ದು, ಪ್ರಸ್ತುತ ಮಕ್ಕಳಿಗೆ ಲಸಿಕೆ ನೀಡುವಲ್ಲಿ ವೇಗ ಸಾಧಿಸುತ್ತಿದೆ.
ಇದುವರೆಗಿನ ಭಾರತದ ಕೋವಿಡ್-19 ಲಸಿಕಾ ವ್ಯಾಪ್ತಿ 180 ಕೋಟಿ 95 ಲಕ್ಷ ದಾಟಿದೆ. ನಿನ್ನೆ 13 ಲಕ್ಷಕ್ಕೂ ಹೆಚ್ಚು ಲಸಿಕೆಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇದುವರೆಗೆ 12 ರಿಂದ 14 ವರ್ಷ ವಯಸ್ಸಿನ 8 ಲಕ್ಷ 21 ಸಾವಿರಕ್ಕೂ ಹೆಚ್ಚು ಮಕ್ಕಳಿಗೆ ಕೋವಿಡ್-19 ಲಸಿಕೆಯ ಮೊದಲ ಡೋಸ್ ನೀಡಲಾಗಿದೆ.
15 ರಿಂದ 18 ವರ್ಷ ವಯಸ್ಸಿನವರಿಗೆ, ಇದುವರೆಗೆ 5 ಕೋಟಿ 61 ಲಕ್ಷಕ್ಕೂ ಹೆಚ್ಚು ಲಸಿಕೆ ಡೋಸ್ಗಳನ್ನು ಮೊದಲ ಡೋಸ್ ಆಗಿ ಮತ್ತು 3 ಕೋಟಿ 52 ಲಕ್ಷ ಡೋಸ್ಗಳನ್ನು ಎರಡನೇ ಡೋಸ್ ಆಗಿ ನೀಡಲಾಗಿದೆ.
ಇದುವರೆಗೆ 2 ಕೋಟಿ 16 ಲಕ್ಷಕ್ಕೂ ಹೆಚ್ಚು ಮುನ್ನೆಚ್ಚರಿಕೆ ಡೋಸ್ಗಳನ್ನು 60 ವರ್ಷ ಮೇಲ್ಪಟ್ಟವರಿಗೆ ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.