ನವದೆಹಲಿ: ಉಕ್ರೇನ್ನಿಂದ ಬಾಂಗ್ಲಾದೇಶಿ ಪ್ರಜೆಗಳನ್ನು ಸ್ಥಳಾಂತರಿಸಲು ಸಹಾಯ ಮಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತ ಸರ್ಕಾರಕ್ಕೆ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಧನ್ಯವಾದ ತಿಳಿಸಿದ್ದಾರೆ.
ಪ್ರಧಾನಿ ಮೋದಿಗೆ ಬರೆದ ಪತ್ರದಲ್ಲಿ ಶೇಖ್ ಹಸೀನಾ ಅವರು, ಉಕ್ರೇನ್ನ ಸುಮಿ ಒಬ್ಲಾಸ್ಟ್ನಲ್ಲಿ ಸಿಲುಕಿರುವ ಭಾರತೀಯರ ಜೊತೆಗೆ ಕೆಲವು ಬಾಂಗ್ಲಾದೇಶಿ ಪ್ರಜೆಗಳನ್ನು ರಕ್ಷಿಸಲು ಮತ್ತು ಸ್ಥಳಾಂತರಿಸಲು ಭಾರತ ನೀಡಿದ ಸಹಾಯಕ್ಕಾಗಿ ಧನ್ಯವಾದಗಳನ್ನು ವ್ಯಕ್ತಪಡಿಸಿದರು.
ಕಳೆದ ವರ್ಷ ಬಂಗಬಂಧು ಶೇಖ್ ಮುಜಿಬುರ್ ರೆಹಮಾನ್ ಅವರ ಜನ್ಮ ಶತಮಾನೋತ್ಸವದ ಆಚರಣೆಯ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಬಾಂಗ್ಲಾದೇಶಕ್ಕೆ ಭೇಟಿ ನೀಡಿದ್ದನ್ನು ನೆನಪಿಸಿಕೊಂಡ ಶೇಖ್ ಹಸೀನಾ, ಕಳೆದ ವರ್ಷಗಳಲ್ಲಿ ಎಲ್ಲಾ ಹಂತಗಳಲ್ಲಿ ಅರ್ಥಪೂರ್ಣ ತೊಡಗಿಸಿಕೊಳ್ಳುವಿಕೆಗಳ ಮೂಲಕ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಲಾಗಿದೆ ಎಂದು ಹೇಳಿದರು.
ಬಾಂಗ್ಲಾದೇಶ ಮತ್ತು ಭಾರತ ಎರಡೂ ದೇಶಗಳು ಸಾರ್ವಕಾಲಿಕವಾಗಿ ಪರಸ್ಪರ ಬೆಂಬಲವಾಗಿ ನಿಲ್ಲುತ್ತವೆ ಮತ್ತು ಉಭಯ ದೇಶಗಳ ಜನರ ಸಾಮೂಹಿಕ ಆಕಾಂಕ್ಷೆಗಳನ್ನು ಸಾಕಾರಗೊಳಿಸಲು ಒಟ್ಟಿಗೆ ಕೆಲಸ ಮಾಡುತ್ತವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.