ನವದೆಹಲಿ: ಉತ್ತರ ಪ್ರದೇಶದಲ್ಲಿ ಹೊಸದಾಗಿ ಚುನಾಯಿತ ಬಿಜೆಪಿ ಸರ್ಕಾರದ ಪ್ರಮಾಣ ವಚನ ಸಮಾರಂಭವು ಮಾರ್ಚ್ 25 ರಂದು ರಾಜ್ಯದ ರಾಜಧಾನಿಯಲ್ಲಿ ನಡೆಯಲಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಮಾರಂಭವು ಮಾರ್ಚ್ 25 ರಂದು ಸಂಜೆ 4 ಗಂಟೆಗೆ ಲಕ್ನೋದ ಶಹೀದ್ ಪಥದಲ್ಲಿರುವ ಇಕಾನಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದದ್ದಾರೆ.
ಸಮಾರಂಭಕ್ಕೂ ಮುನ್ನ, ಚುನಾವಣೆಯಲ್ಲಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಮುನ್ನಡೆಸಿದ ಯೋಗಿ ಆದಿತ್ಯನಾಥ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.
ಇದು ಆದಿತ್ಯನಾಥ್ ಅವರ ಸತತ ಎರಡನೇ ಅಧಿಕಾರ ಅವಧಿಯಾಗಿದೆ.
ಉತ್ತರ ಪ್ರದೇಶದಲ್ಲಿ ಸರ್ಕಾರ ರಚನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ರಘುಬರ್ ದಾಸ್ ಅವರನ್ನು ಕ್ರಮವಾಗಿ ವೀಕ್ಷಕ ಮತ್ತು ಸಹ ವೀಕ್ಷಕರನ್ನಾಗಿ ನೇಮಿಸಲಾಗಿದೆ.
ಆದಿತ್ಯನಾಥ್ ಗೋರಖ್ಪುರದಿಂದ ಲಕ್ನೋ ತಲುಪಿದ ನಂತರ ಪ್ರಮಾಣವಚನ ಸ್ವೀಕರಿಸುವ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಲಾಗುತ್ತದೆ.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ಆಡಳಿತವಿರುವ ಇತರ ರಾಜ್ಯಗಳ ಮುಖ್ಯಮಂತ್ರಿಗಳಲ್ಲದೆ, ಪಕ್ಷದ ಮುಖಂಡರು ಮತ್ತು ಪಕ್ಷದ ಪದಾಧಿಕಾರಿಗಳು ಸಹ ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ, ವಿರೋಧ ಪಕ್ಷಗಳ ಉನ್ನತ ನಾಯಕರಿಗೂ ಆಹ್ವಾನವನ್ನು ನೀಡಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.