ಬೆಂಗಳೂರು: ಕರ್ನಾಟಕವು ದೇಶದಲ್ಲೇ ಮೊದಲ ಬಾರಿಗೆ ‘ಕಲಿಕಾ ಚೇತರಿಕೆ’ ಎಂಬ ವಿಶೇಷ ಕಾರ್ಯಕ್ರಮವನ್ನು ಜಾರಿಗೊಳಿಸುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ನಾಗೇಶ್ ತಿಳಿಸಿದ್ದಾರೆ.
ನಿನ್ನೆ ಅವರು ಬೆಂಗಳೂರಿನ ಜಯನಗರದಲ್ಲಿರುವ ಆರ್ ವಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದಲ್ಲಿ ‘ಕಲಿಕಾ ಚೇತರ ಕೆ’ ಕಾರ್ಯಕ್ರಮವನ್ನು ಉದ್ಘಾಟಿಸಿದ್ದಾರೆ.
ಕಲಿಕಾ ಹಿನ್ನಡೆಯನ್ನು ಸರಿದೂಗಿಸುವ ಸಲುವಾಗಿ ಕಡಿತ ಚೇತರಿಕೆ ವಿಶೇಷ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕರೋನವೈರಸ್ ಸಾಂಕ್ರಾಮಿಕ ರೋಗದ ಪರಿಣಾಮವಾಗಿ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಸಮಸ್ಯೆಯಾಗಿದೆ. ಶಿಕ್ಷಣ ಇಲಾಖೆಗೂ ಹಲವಾರು ಸವಾಲುಗಳು ಎದುರಾಗಿದೆ. ಈ ಸವಾಲುಗಳನ್ನು ಮೆಟ್ಟಿನಿಂತು ಕಲಿಕ ಚೇತರಿಗೆ ಕಾರ್ಯಕ್ರಮದ ಮೂಲಕ ಶಿಕ್ಷಣ ಮುಂದುವರಿಸಿ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಶಿಕ್ಷಕರು ಕಾರ್ಯನಿರ್ವಹಿಸಬೇಕಾಗಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.