ಜಮ್ಮು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಜಮ್ಮುವಿನಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) 83 ನೇ ಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ರಾಷ್ಟ್ರ ರಾಜಧಾನಿಯ ಹೊರಗೆ ಸಿಆರ್ಪಿಎಫ್ ತನ್ನ ಸ್ಥಾಪನಾ ದಿನವನ್ನು ಆಚರಿಸುತ್ತಿರುವುದು ಇದೇ ಮೊದಲು.
1950 ರಲ್ಲಿ ಸಂಸತ್ತು ಸಿಆರ್ಪಿಎಫ್ ಕಾಯಿದೆಯನ್ನು ಜಾರಿಗೊಳಿಸಿದ ನಂತರ ಭಾರತದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಸಿಆರ್ಪಿಎಫ್ ಗೆ ಕಲರ್ಸ್ ಪ್ರಸ್ತುತಪಡಿಸಿದ ನಂತರ ಸಿಆರ್ಪಿಎಫ್ ರೈಸಿಂಗ್ ಡೇ ಅನ್ನು ಮಾರ್ಚ್ 19 ರಂದು ನಡೆಸುತ್ತಾ ಬರಲಾಗುತ್ತಿದೆ. ಸಿಆರ್ಪಿಎಫ್ ಅನ್ನು 1939 ರಲ್ಲಿ ಆರಂಭಿಸಲಾಯಿತು ಮತ್ತು ಅದನ್ನು Crown Representative’s Police ಎಂದು ಕರೆಯಲಾಯಿತು. ಸ್ವಾತಂತ್ರ್ಯದ ನಂತರ ಅದನ್ನು ಮರುನಾಮಕರಣ ಮಾಡಲಾಯಿತು ಮತ್ತು ಡಿಸೆಂಬರ್ 28, 1949 ರಂದು ಕೇಂದ್ರೀಯ ಮೀಸಲು ಪೊಲೀಸ್ ಎಂದು ಮರುವಿನ್ಯಾಸಗೊಳಿಸಲಾಯಿತು ಮತ್ತು ದೇಶದ ಆಂತರಿಕ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಅದಕ್ಕೆ ಆದೇಶ ನೀಡಲಾಯಿತು.
ಜಮ್ಮು ತಲುಪಿದ ನಂತರ, ಭಯೋತ್ಪಾದಕ ಘಟನೆಗಳಲ್ಲಿ ಹುತಾತ್ಮರಾದ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಿಬ್ಬಂದಿಯ ಸಂಬಂಧಿಕರಿಗೆ ಶಾ ಶುಕ್ರವಾರ ಉದ್ಯೋಗ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಿದರು.
“ಜಮ್ಮು ಮತ್ತು ಕಾಶ್ಮೀರವನ್ನು ಸುರಕ್ಷಿತವಾಗಿಡಲು ಅವರ ಸಮರ್ಪಣೆ ಮತ್ತು ಶೌರ್ಯಕ್ಕಾಗಿ ಇಡೀ ರಾಷ್ಟ್ರವು ಹೆಮ್ಮೆಪಡುತ್ತದೆ. ನರೇಂದ್ರ ಮೋದಿ ಸರ್ಕಾರವು ಜಮ್ಮು ಮತ್ತು ಕಾಶ್ಮೀರದಲ್ಲಿ ಎಲ್ಲಾ ಪೊಲೀಸರು ಮತ್ತು ಅವರ ಕುಟುಂಬಗಳ ಕಲ್ಯಾಣಕ್ಕೆ ಬದ್ಧವಾಗಿದೆ” ಎಂದು ಶಾ ಟ್ವೀಟ್ನಲ್ಲಿ ಹೇಳಿದ್ದಾರೆ.
ಕಳೆದ ಐದು ತಿಂಗಳಲ್ಲಿ ಜಮ್ಮುವಿಗೆ ಶಾ ಅವರ ಎರಡನೇ ಭೇಟಿ ಇದಾಗಿದೆ. ಇದಕ್ಕೂ ಮುನ್ನ ಅವರು ಐದು ದಿನಗಳ ಕಾಲ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದರು.
ಮೂಲಗಳ ಪ್ರಕಾರ, ಕೇಂದ್ರ ಗೃಹ ಸಚಿವರು ಅಮರನಾಥ ಯಾತ್ರೆಗೆ ಮುನ್ನ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.