ಬೆಂಗಳೂರು: ತರಗತಿಯೊಳಗೆ ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್ನ ವಿಶೇಷ ಪೀಠದ ನ್ಯಾಯಾಧೀಶರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.
ಕೋವೈ ರಹಮತುಲ್ಲಾನನ್ನು ತಿರುನಲ್ವೇಲಿಯಲ್ಲಿ ಬಂಧಿಸಿದರೆ, ಎಸ್. ಜಮಾಲ್ ಮೊಹಮ್ಮದ್ ಉಸ್ಮಾನಿಯನ್ನು ತಂಜಾವೂರ್ನಿಂದ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಇಬ್ಬರ ಬಂಧನಗಳೂ ಶನಿವಾರ ರಾತ್ರಿ ನಡೆದಿವೆ.
ಆರೋಪಿಗಳು ತಮಿಳುನಾಡು ತೌಹೀದ್ ಜಮಾತ್ (ಟಿಎನ್ಟಿಜೆ) ಸಂಘಟನೆ ಪದಾಧಿಕಾರಿಗಳು ಎಂದು ಗುರುತಿಸಲಾಗಿದೆ.
ಆರೋಪಿಗಳ ವಿರುದ್ಧ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಹಲವು ದೂರುಗಳು ದಾಖಲಾದ ನಂತರ ಬಂಧಿಸಲಾಗಿದೆ. ಈ ಸಂಬಂಧ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕಳೆದ ವಾರ, ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಮತ್ತು ಖಾಜಿ ಜೈಬುನ್ನೆಸಾ ಮೊಹಿಯುದ್ದೀನ್ ಅವರನ್ನೊಳಗೊಂಡ ವಿಶೇಷ ಪೀಠ, ತರಗತಿಗಳಲ್ಲಿ ಹಿಜಾಬ್ಗೆ ಬೇಡಿಕೆಯಿರುವ ಅರ್ಜಿಗಳನ್ನು ವಜಾಗೊಳಿಸಿ, ಹಿಜಾಬ್ ಧರಿಸುವುದು ಇಸ್ಲಾಂನ ಅವಿಭಾಜ್ಯ ಅಂಗವಲ್ಲ ಎಂದು ಒತ್ತಿಹೇಳಿತ್ತು.
ತೀರ್ಪಿನ ವಿರುದ್ಧ ತಮಿಳುನಾಡಿನಲ್ಲಿ ಹಲವು ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಆರೋಪಿ ಕೋವೈ ರಹಮತುಲ್ಲಾ ಕರ್ನಾಟಕದ ನ್ಯಾಯಾಧೀಶರ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸುವ ವಿಡಿಯೋ ಮಾಡಿದ್ದು ವೈರಲ್ ಆಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.