ನವದೆಹಲಿ: ಸ್ವಾವಲಂಬಿಯಾಗಿ ನಿಲ್ಲಲು ಭಾರತದಲ್ಲಿ ತಯಾರಾದ ಉತ್ಪನ್ನಗಳನ್ನು ಪ್ರಚಾರ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಜನರಿಗೆ ಕರೆ ನೀಡಿದ್ದಾರೆ.
ಗುಜರಾತ್ನ ಅಹಮದಾಬಾದ್ನಲ್ಲಿ ಸ್ವಾಮಿನಾರಾಯಣ ಗುರುಕುಲ ವಿಶ್ವವಿದ್ಯಾ ಪ್ರತಿಷ್ಠಾನಂ (SGVP) ನ ಗುರುದೇವ್ ಶಾಸ್ತ್ರೀಜಿ ಮಹಾರಾಜ್ ಅವರ ಜೀವನದ ಕುರಿತಾದ ಪುಸ್ತಕ “ಶ್ರೀ ಧರ್ಮಜೀವನ ಗಾಥಾ” ದ ಆರು ಸಂಪುಟಗಳ ಬಿಡುಗಡೆ ಸಮಾರಂಭದಲ್ಲಿ ಮೋದಿ ಅವರು ವರ್ಚುವಲ್ ಆಗಿ ಮಾತನಾಡಿದ ಸಂದರ್ಭದಲ್ಲಿ ಈ ಕರೆಯನ್ನು ನೀಡಿದ್ದಾರೆ.
ಯುದ್ಧ ಮತ್ತು ಕೋವಿಡ್ -19 ಸಾಂಕ್ರಾಮಿಕದಂತಹ ಜಗತ್ತು ಎದುರಿಸುತ್ತಿರುವ ಸವಾಲುಗಳನ್ನು ಎದುರಿಸಲು ಆತ್ಮನಿರ್ಭರ ಭಾರತದ ಅಗತ್ಯವು ಹೆಚ್ಚಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.
“ಇಂದಿನ ಅನಿಶ್ಚಿತ ಜಾಗತಿಕ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬರೂ ಹೊಸ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಸಾಂಕ್ರಾಮಿಕ ರೋಗ ಮತ್ತು ಈಗ ರಷ್ಯಾ-ಉಕ್ರೇನ್ ಯುದ್ಧದ ಪರಿಸ್ಥಿತಿಯು ಎಷ್ಟು ಅನಿರೀಕ್ಷಿತವಾಗಿದೆಯೆಂದರೆ ನಾವು ಬಾಧಿಸದೆ ಇರಲು ಸಾಧ್ಯವಿಲ್ಲ. ಜಾಗತಿಕ ಅನಿಶ್ಚಿತತೆಗಳ ಪರಿಣಾಮವನ್ನು ಕಡಿಮೆ ಮಾಡಲು ಆತ್ಮನಿರ್ಭರ ಭಾರತವನ್ನು ಉತ್ತೇಜಿಸಬೇಕು. ‘ಸ್ಥಳೀಯತೆಗೆ ಧ್ವನಿಯಾಗಬೇಕು’, ಇದು ಉದ್ಯೋಗವನ್ನು ಸೃಷ್ಟಿಸುತ್ತದೆ ಮತ್ತು ದೇಶವನ್ನು ಬಲಿಷ್ಠಗೊಳಿಸುತ್ತದೆ” ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.