ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯನ್ ಪ್ರಧಾನಿ ಸ್ಕಾಟ್ ಮಾರಿಸನ್ ನಡುವಿನ ವರ್ಚುವಲ್ ಸಭೆ ನಡೆಯಲಿದೆ. ಇದಕ್ಕೂ ಮುಂಚಿತವಾಗಿ 29 ಪುರಾತನ ವಸ್ತುಗಳನ್ನು ಆಸ್ಟ್ರೇಲಿಯಾವು ಭಾರತಕ್ಕೆ ಹಿಂತಿರುಗಿಸಿದೆ.
ಶಿವ ಮತ್ತು ಶಿವನ ಶಿಷ್ಯರು, ಶಕ್ತಿ, ಭಗವಾನ್ ವಿಷ್ಣು ಮತ್ತು ಅವರ ವಿವಿಧ ರೂಪಗಳು, ಜೈನ ಸಂಪ್ರದಾಯಿಕ ವಸ್ತುಗಳು, ಭಾವಚಿತ್ರಗಳು ಮತ್ತು ಅಲಂಕಾರಿಕ ವಸ್ತುಗಳು, ಪೂಜಿಸುವ ವಸ್ತುಗಳು ಸೇರಿದಂತೆ ಪ್ರಾಚೀನ ವಸ್ತುಗಳನ್ನು ಆಸ್ಟ್ರೇಲಿಯಾದಿಂದ ಭಾರತಕ್ಕೆ ತರಲಾಗಿದ್ದು, ಇದನ್ನು ಪ್ರಧಾನಿ ಮೋದಿ ಇಂದು ಪರಿಶೀಲನೆ ನಡೆಸಿದ್ದಾರೆ.
ಪ್ರಾಥಮಿಕವಾಗಿ ಶಿಲ್ಪಗಳು ಮತ್ತು ವರ್ಣಚಿತ್ರಗಳು, ಕಲಾಕೃತಿಗಳು ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ, ಉತ್ತರ ಪ್ರದೇಶ, ತಮಿಳುನಾಡು, ತೆಲಂಗಾಣ ಮತ್ತು ಪಶ್ಚಿಮ ಬಂಗಾಳದಿಂದ ಕಳೆದುಹೋದ ವಸ್ತುಗಳಾಗಿ ಎಂದು ಹೇಳಲಾಗಿದೆ.
ಇಂದು ಮಧ್ಯಾಹ್ನ 12.30 ಕ್ಕೆ ನಿಗದಿಯಾಗಿರುವ ವರ್ಚುವಲ್ ದ್ವಿಪಕ್ಷೀಯ ಶೃಂಗಸಭೆಯಲ್ಲಿ, ಆಸ್ಟ್ರೇಲಿಯಾ ಭಾರತದಲ್ಲಿ 1,500 ಕೋಟಿ ರೂಪಾಯಿ ಮೌಲ್ಯದ ಹೂಡಿಕೆಯನ್ನು ಘೋಷಿಸುತ್ತದೆ ಎಂದು ಹೇಳಲಾಗಿದೆ.
ಹೂಡಿಕೆಗಳು ತಂತ್ರಜ್ಞಾನ ಮತ್ತು ನಿರ್ಣಾಯಕ ಖನಿಜಗಳು ಸೇರಿದಂತೆ ವಲಯಗಳಾದ್ಯಂತ ಇರಲಿದೆ. ಇದು ಭಾರತದಲ್ಲಿ ಆಸ್ಟ್ರೇಲಿಯಾದ ಅತಿದೊಡ್ಡ ಹೂಡಿಕೆಯಾಗಿದೆ.
#WATCH | PM Modi inspects the 29 antiquities which have been repatriated to India by Australia. The antiquities range in 6 broad categories as per themes – Shiva and his disciples, Worshipping Shakti, Lord Vishnu and his forms, Jain tradition, portraits and decorative objects. pic.twitter.com/uQiKdlCdtX
— ANI (@ANI) March 21, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.