ನವದೆಹಲಿ: ಇಂದು ಅಂತರಾಷ್ಟ್ರೀಯ ಅರಣ್ಯ ದಿನ. ಪ್ರತಿ ವರ್ಷ ಮಾರ್ಚ್ 21 ರಂದು ಜಗತ್ತಿನಾದ್ಯಂತ ಈ ದಿನ ಆಚರಿಸಲಾಗುತ್ತದೆ. ವಿವಿಧ ಬಗೆಯ ಅರಣ್ಯಗಳ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತದೆ.
ʼಅರಣ್ಯಗಳು ಮತ್ತು ಸುಸ್ಥಿರ ಉತ್ಪಾದನೆ ಮತ್ತು ಬಳಕೆʼ ಎಂಬ ಥೀಮ್ನೊಂದಿಗೆ ಈ ವರ್ಷದ ಅರಣ್ಯ ದಿನವನ್ನು ಆಚರಣೆ ಮಾಡಲಾಗುತ್ತಿದೆ.
ಅಂತರಾಷ್ಟ್ರೀಯ ಅರಣ್ಯ ದಿನದಂದು, ಪ್ರಪಂಚದಾದ್ಯಂತ ಹಲವಾರು ದೇಶಗಳಲ್ಲಿ ಅರಣ್ಯ ಸಂರಕ್ಷಣೆಯ ಬಗ್ಗೆ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪ್ರಯತ್ನಗಳನ್ನು ಕೈಗೊಳ್ಳಲು ಪ್ರೋತ್ಸಾಹಿಸಲಾಗುತ್ತದೆ. ಕಾಡುಗಳು ಮತ್ತು ಮರಗಳನ್ನು ಒಳಗೊಂಡಿರುವ ಚಟುವಟಿಕೆಗಳನ್ನು ಸಂಘಟಿಸಲು ಗಿಡ ನೆಡುವ ಅಭಿಯಾನಗಳನ್ನು ನಡೆಸಲಾಗುತ್ತದೆ. ಈ ದಿನವು ಜನರಿಗೆ ಅರಣ್ಯಗಳನ್ನು ಗೌರವಿಸಲು ಮತ್ತು ಉಳಿಸಲು ಮತ್ತು ಜೀವಿಗಳ ಜೀವನದಲ್ಲಿ ಅರಣ್ಯಗಳ ಮಹತ್ವವನ್ನು ನೆನಪಿಸುವಲ್ಲಿ ಮಹತ್ವದ ಪಾತ್ರವಹಿಸುತ್ತದೆ. ಪ್ರಾಣಿಗಳು ಹಾಗೂ ಮನುಷ್ಯರಿಗೆ ಆಹಾರ, ನೀರು ಮತ್ತು ಆಶ್ರಯವನ್ನು ಒದಗಿಸುವಲ್ಲಿ ಅರಣ್ಯಗಳು ಪ್ರಮುಖ ಪಾತ್ರ ವಹಿಸುತ್ತವೆ.
1971 ರಲ್ಲಿ, ಆಹಾರ ಮತ್ತು ಕೃಷಿ ಸಂಸ್ಥೆಯ ಸಮ್ಮೇಳನದ 16 ನೇ ಅಧಿವೇಶನದಲ್ಲಿ ವಿಶ್ವ ಅರಣ್ಯ ದಿನಾಚರಣೆಗೆ ಒಪ್ಪಿಗೆಯನ್ನು ನೀಡಲಾಯಿತು. ನಂತರ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು 28 ನವೆಂಬರ್ 2012 ರಂದು ಮಾರ್ಚ್ 21 ಅನ್ನು ಅಂತರರಾಷ್ಟ್ರೀಯ ಅರಣ್ಯ ದಿನವೆಂದು ಘೋಷಿಸಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.