ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ 2022 ನೇ ವರ್ಷದ ಎರಡು ಪದ್ಮವಿಭೂಷಣ, ಎಂಟು ಪದ್ಮಭೂಷಣ ಮತ್ತು 54 ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.
ಪ್ರಶಸ್ತಿ ಪುರಸ್ಕೃತರಲ್ಲಿ ಪದ್ಮವಿಭೂಷಣ ಪುರಸ್ಕೃತರು – ರಾಧೇ ಶ್ಯಾಮ್ ಮತ್ತು ಜನರಲ್ ಬಿಪಿನ್ ರಾವತ್ (ಮರಣೋತ್ತರ).
ಗುಲಾಂ ನಬಿ ಆಜಾದ್, ಗುರ್ಮೀತ್ ಬಾವಾ (ಮರಣೋತ್ತರ), ಎನ್.ಚಂದ್ರಶೇಖರನ್, ದೇವೇಂದ್ರ ಝಜಾರಿಯಾ, ರಶೀದ್ ಖಾನ್, ರಾಜೀವ್ ಮೆಹ್ರಿಷಿ, ಡಾ. ಸೈರಸ್ ಪೂನವಾಲಾ, ಮತ್ತು ಸಚ್ಚಿದಾನಂದ ಸ್ವಾಮಿ ಪದ್ಮಭೂಷಣ ಪ್ರಶಸ್ತಿಗಳನ್ನು ಸ್ವೀಕರಿಸಿದ್ದಾರೆ.
ಪ್ರಶಸ್ತಿಗಳನ್ನು ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ – ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ. ಈ ಪ್ರಶಸ್ತಿಗಳನ್ನು ಕಲೆ, ಸಾಮಾಜಿಕ ಕಾರ್ಯ, ಸಾರ್ವಜನಿಕ ವ್ಯವಹಾರಗಳು, ವಿಜ್ಞಾನ ಮತ್ತು ಎಂಜಿನಿಯರಿಂಗ್, ವ್ಯಾಪಾರ ಮತ್ತು ಉದ್ಯಮ, ವೈದ್ಯಕೀಯ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ ಮತ್ತು ನಾಗರಿಕ ಸೇವೆಯಂತಹ ವಿವಿಧ ವಿಭಾಗಗಳಲ್ಲಿ ನೀಡಲಾಗುತ್ತದೆ. ಪದ್ಮವಿಭೂಷಣವನ್ನು ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ ನೀಡಲಾಗುತ್ತದೆ. ಉನ್ನತ ಶ್ರೇಣಿಯ ವಿಶಿಷ್ಟ ಸೇವೆಗಾಗಿ ಪದ್ಮಭೂಷಣ ಮತ್ತು ಯಾವುದೇ ಕ್ಷೇತ್ರದಲ್ಲಿನ ವಿಶಿಷ್ಟ ಸೇವೆಗಾಗಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಗುತ್ತದೆ.
ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಶಸ್ತಿಗಳನ್ನು ಪ್ರಕಟಿಸಲಾಗುತ್ತದೆ. ಈ ವರ್ಷ ಒಟ್ಟು 128 ಪದ್ಮ ಪ್ರಶಸ್ತಿಗಳನ್ನು ನೀಡಲಾಗಿದೆ. ಪ್ರಶಸ್ತಿ ಪುರಸ್ಕೃತರ ಪಟ್ಟಿಯು ನಾಲ್ಕು ಪದ್ಮವಿಭೂಷಣ, 17 ಪದ್ಮಭೂಷಣ ಮತ್ತು 107 ಪದ್ಮಶ್ರೀ ಪ್ರಶಸ್ತಿಗಳನ್ನು ಒಳಗೊಂಡಿತ್ತು. ಪುರಸ್ಕೃತರಲ್ಲಿ 34 ಮಂದಿ ಮಹಿಳೆಯರು ಎಂದು ಗೃಹ ಸಚಿವಾಲಯ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.