ಬೆಂಗಳೂರು: ಈ ವರ್ಷದ ಜೂನ್ ತಿಂಗಳಿನಿಂದ ಆರಂಭವಾಗುವ ಶೈಕ್ಷಣಿಕ ವರ್ಷದಿಂದಲೇ ಶಾಲಾ ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಅಂಶಗಳನ್ನು ಸೇರ್ಪಡೆಗೊಳಿಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ. ಸರ್ಕಾರದ ನಿರ್ಧಾರಕ್ಕೆ ರಾಜ್ಯದ ಜನತೆಯಿಂದಲೂ ವ್ಯಾಪಕವಾದ ಬೆಂಬಲ ದೊರೆತಿದೆ.
ವಿಶೇಷವೆಂದರೆ ವಿಧಾನ ಸಭೆಯ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ಕೂಡ ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಸೇರ್ಪಡೆಗೆ ಯಾವುದೇ ಅಭ್ಯಂತರ ಇಲ್ಲ ಎಂದು ಹೇಳಿದ್ದಾರೆ.
ಈ ನಿರ್ಧಾರದ ಬಗ್ಗೆ ಚರ್ಚಿಸಲು ಶೀಘ್ರದಲ್ಲೇ ಮುಖ್ಯಮಂತ್ರಿಗಳೊಂದಿಗೆ ಸಭೆಯನ್ನು ನಡೆಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ಹೇಳಿದ್ದಾರೆ. ಮಾತ್ರವಲ್ಲದೆ ಇದಕ್ಕೆ ಸಂಬಂಧಿಸಿದಂತೆ ತಜ್ಞರ ಸಮಿತಿಯನ್ನು ರಚಿಸಲಾಗುವುದು, ಈ ಸಮಿತಿ ನೀಡುವ ವರದಿ ಆಧರಿಸಿ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಗುಜರಾತ್ ಸರಕಾರ 6ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಭಗವದ್ಗೀತೆಯ ಸಾರವನ್ನು ಬೋಧಿಸುವ ನಿರ್ಧಾರ ತೆಗೆದುಕೊಂಡ ಬಳಿಕ ಕರ್ನಾಟಕದಲ್ಲೂ ಇಂತಹ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಮಕ್ಕಳಲ್ಲಿ ನೈತಿಕ ಪಾಠವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಇದು ಮಹತ್ವದ ಪಾತ್ರವನ್ನು ವಹಿಸಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.