ಬೆಂಗಳೂರು: ಮೇ ತಿಂಗಳ ಮೂರನೇ ಅಥವಾ ನಾಲ್ಕನೇ ವಾರದಲ್ಲಿ ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ಮಹೇಶ ಜೋಶಿ ಕಲಬುರ್ಗಿಯಲ್ಲಿ ನಿನ್ನೆ ತಿಳಿಸಿದರು.
ಸಮ್ಮೇಳನದ ಪೂರ್ವಸಿದ್ಧತೆಗಾಗಿ ಬರುವ 27 ರಂದು ಹಾವೇರಿ ಜಿಲ್ಲಾಧಿಕಾರಿ ಜತೆ ಸಭೆ ನಡೆಸಲಾಗುವುದು ಹಾಗೂ ಮೇ 5 ರಂದು ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ಪ್ರಥಮ ದುಂಡು ಮೇಜಿನ ಸಭೆ ಕರೆಯಲಾಗಿದೆ ಎಂದರು.
ಮುಂದಿನ ಐದು ವರ್ಷದ ಅವಧಿಯಲ್ಲಿ ಒಂದು ಕೋಟಿ ವರೆಗೆ ಸದಸ್ಯತ್ವ ಮಾಡುವ ಗುರಿ ಹೊಂದಲಾಗಿದ್ದು, ಕನ್ನಡ ಸಾಹಿತ್ಯ ಪರಿಷತ್ ಜನಸಾಮಾನ್ಯರ ಪರಿಷತ್ತು ಆಗುವ ನಿಟ್ಟಿನಲ್ಲಿ ಆಡಳಿತಾತ್ಮಕ, ವೈವಿಧ್ಯಮಯ ಕಾರ್ಯಕ್ರಮ ಆಯೋಜಿಸಲಾಗುವುದು . ಕನ್ನಡ ಶಾಲೆಗಳ ಉಳಿವಿಗಾಗಿ ಸರ್ಕಾರದೊಂದಿಗೆ ಮುಕ್ತ ಚರ್ಚೆ ನಡೆಸಲಿದ್ದೇವೆ . ಬ್ಯಾಂಕಿಂಗ್, ರೈಲ್ವೆ, ESIC ಮತ್ತಿತರರ ಕಡೆ ಕನ್ನಡ ಬಳಸುವಂತೆ ರಾಜ್ಯ ಸರ್ಕಾರ ಕಡ್ಡಾಯವಾಗಿ ನಿರ್ದೇಶನ ನೀಡಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.