ಬೆಂಗಳೂರು: ಶಾಸಕ ಡಾ.ಭರತ್ ಶೆಟ್ಟಿ ಹಾಗೂ ವಿಶ್ವ ಹಿಂದೂ ಪರಿಷತ್ ನಿಯೋಗವು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಗೋಹತ್ಯಾ ನಿಷೇಧ ಕಾನೂನಿನ ಸಮರ್ಪಕ ಅನುಷ್ಠಾನ ಸೇರಿದಂತೆ ಹಲವು ಬೇಡಿಕೆಗಳನ್ನು ಸಲ್ಲಿಸಿತು.
ರಾಜ್ಯ ಸರಕಾರ ಜಾರಿಗೆ ತಂದಿರುವ ಗೋಹತ್ಯಾ ನಿಷೇಧ ಕಾನೂನನ್ನು ಪೊಲೀಸ್ ಇಲಾಖೆ ಸಮರ್ಪಕವಾಗಿ ಅನುಷ್ಟಾನಕ್ಕೆ ತರಬೇಕು. ಅಕ್ರಮ ಗೋಸಾಗಾಟ ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು. ಗೋಮಾಳದ ಜಾಗವನ್ನು ಅದೇ ಉದ್ದೇಶಕ್ಕೆ ಬಳಸಬೇಕು. ಗೋಶಾಲೆಗಳ ನಿರ್ವಹಣೆಗೆ ಅನುದಾನ ಹೆಚ್ಚಿಸಬೇಕು ಹಾಗೂ ಇತರ ಬೇಡಿಕೆಗಳೊಂದಿಗೆ ವಿಶ್ವ ಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ್ಯ ಕಾರ್ಯಾಧ್ಯಕ್ಷರಾಗಿರುವ ಪ್ರೋ. ಎಂ ಬಿ ಪುರಾಣಿಕ್, ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್, ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಹಾಗೂ ಮುಖಂಡರು ಮಾನ್ಯ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.
ಗೋವುಗಳ ಬಗ್ಗೆ ವಿಪರೀತ ಕಾಳಜಿ ಇರುವ ಮುಖ್ಯಮಂತ್ರಿಗಳು ಶೀಘ್ರವಾಗಿ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದಾಗಿ ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.