ಬೆಂಗಳೂರು: ಖ್ಯಾತ ವಿಜ್ಞಾನಿ, ಭಾರತ ರತ್ನ ಪ್ರೊ. ಸಿಎನ್ಆರ್ ರಾವ್ ಅವರಿಗೆ ಪ್ರತಿಷ್ಠಿತ ಎನಿ ಎನರ್ಜಿ ಫ್ರೊಂಟೈರ್ಸ್ 2020 ಪ್ರಶಸ್ತಿಯನ್ನು ಪ್ರದಾನಿಸಲಾಗಿದೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಬೆಂಗಳೂರಿನ ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಎನರ್ಜಿ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ನೀಡಲಾಗುವ ಇಟಲಿ ಸರ್ಕಾರದ ಪ್ರಶಸ್ತಿ ಇದಾಗಿದೆ. ಈ ಪ್ರಶಸ್ತಿಯನ್ನು ಎನರ್ಜಿ ಕ್ಷೇತ್ರದ ನೋಬಲ್ ಪ್ರಶಸ್ತಿ ಎಂದೇ ವ್ಯಾಖ್ಯಾನಿಸಲಾಗುತ್ತದೆ.
ಪ್ರೊ. ರಾವ್ ಅವರು ಇಡೀ ಏಷ್ಯಾ ಖಂಡದಲ್ಲಿಯೇ ಈ ಪ್ರಶಸ್ತಿ ಪಡೆಯುತ್ತಿರುವ ಮೊದಲ ವಿಜ್ಞಾನಿ ಎಂಬುದು ವಿಶೇಷ.
ಈ ಪ್ರಶಸ್ತಿಯನ್ನು ಈಗಾಗಲೇ ಘೋಷಿಲಾಗಿತ್ತು, ಆದರೆ ಕೋವಿಡ್ ಹಿನ್ನೆಲೆಯಲ್ಲಿ ಪ್ರದಾನ ಮಾಡಿರಲಿಲ್ಲ. ಇವತ್ತು ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.