ಬೆಂಗಳೂರು: ಎಲೆಕ್ಟ್ರಿಕ್ ವಾಹನ ಮಾರಾಟದಲ್ಲಿ ಕರ್ನಾಟಕವು ದೇಶದಲ್ಲೇ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಮೊದಲ ಸ್ಥಾನವನ್ನು ಉತ್ತರಪ್ರದೇಶ ಪಡೆದುಕೊಂಡಿದೆ.
ವರದಿಗಳ ಪ್ರಕಾರ, 2021ರಲ್ಲಿ ಕರ್ನಾಟಕದಲ್ಲಿ 33,307 ಎಲೆಕ್ಟ್ರಿಕ್ ವಾಹನಗಳು ಮಾರಾಟವನ್ನು ಕಂಡಿವೆ. ಮೊದಲ ಸ್ಥಾನದಲ್ಲಿರುವ ಉತ್ತರಪ್ರದೇಶದಲ್ಲಿ 66,702 ಎಲೆಕ್ಟ್ರಿಕ್ ವಾಹನಗಳು ಮಾರಾಟವಾಗಿವೆ. ತಮಿಳುನಾಡು ಮೂರನೇ ಸ್ಥಾನದಲ್ಲಿದ್ದು, 30,037 ಎಲೆಕ್ಟ್ರಿಕ್ ವಾಹನಗಳನ್ನು ಮಾರಾಟ ಮಾಡಿದೆ. ಮಹಾರಾಷ್ಟ್ರ 28,860, ದೆಹಲಿ 25809 ಎಲೆಕ್ಟ್ರಿಕ್ ವಾಹನಗಳನ್ನು ಮಾರಾಟ ಮಾಡಿ ಕ್ರಮವಾಗಿ ನಾಲ್ಕು ಮತ್ತು ಐದನೇ ಸ್ಥಾನದಲ್ಲಿದೆ.
2020ರಲ್ಲಿ ಮೂರನೇ ಸ್ಥಾನದಲ್ಲಿದ್ದ ಕರ್ನಾಟಕ ಇದೀಗ ದ್ವಿತೀಯ ಸ್ಥಾನಕ್ಕೇರಿದ್ದು ಮಹತ್ವದ ಬೆಳವಣಿಗೆಯಾಗಿದೆ. ರಾಜ್ಯದ ಎಲೆಕ್ಟ್ರಿಕ್ ವಾಹನ ನೀತಿ ಮಾರುಕಟ್ಟೆ ಬೆಳವಣಿಗೆಗೆ ಪೂರಕ ವಾತಾವರಣ ನಿರ್ಮಾಣಮಾಡಿರುವುದು ಇದಕ್ಕೆ ಕಾರಣ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.