ನವದೆಹಲಿ: ಫೆಬ್ರವರಿ 2020ರಲ್ಲಿ ನಡೆದ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಷಡ್ಯಂತ್ರ ನಡೆಸಿದ ಪ್ರಕರಣದಲ್ಲಿ ಜೆಎನ್ಯು ಮಾಜಿ ವಿದ್ಯಾರ್ಥಿ ಉಮರ್ ಖಲಿದ್ಗೆ ದೆಹಲಿ ನ್ಯಾಯಾಲಯವು ಗುರುವಾರ ಜಾಮೀನು ನಿರಾಕರಿಸಿದೆ.
ಮಾರ್ಚ್ 3 ರಂದು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಮಿತಾಭ್ ರಾವತ್ ಅವರು ಖಲಿದ್ ಮತ್ತು ಪ್ರಾಸಿಕ್ಯೂಷನ್ ಪರ ವಕೀಲರ ವಾದವನ್ನು ಆಲಿಸಿದ ನಂತರ ಆದೇಶವನ್ನು ಕಾಯ್ದಿರಿಸಿದ್ದರು. ವಾದದ ಸಮಯದಲ್ಲಿ, ಆರೋಪಿಯು ತನ್ನ ವಿರುದ್ಧದ ಪ್ರಕರಣವನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ಗೆ ಸಾಕ್ಷ್ಯಾಧಾರಗಳ ಕೊರತೆಯಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು.
53 ಜನರನ್ನು ಬಲಿ ತೆಗೆದುಕೊಂಡ ಮತ್ತು 700 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದ ಫೆಬ್ರವರಿ 2020 ರ ಗಲಭೆಯ ‘ಮಾಸ್ಟರ್ಮೈಂಡ್ಗಳು’ ಎಂಬ ಆರೋಪದಲ್ಲಿ ಖಲಿದ್ ಮತ್ತು ಇತರ ಹಲವರ ವಿರುದ್ಧ ಭಯೋತ್ಪಾದನಾ ವಿರೋಧಿ ಕಾನೂನು UAPA ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸಿಎಎ ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದ್ದಿತು. ಖಲಿದ್ ಅಲ್ಲದೆ, ಕಾರ್ಯಕರ್ತ ಖಲಿದ್ ಸೈಫಿ, ಜೆಎನ್ಯು ವಿದ್ಯಾರ್ಥಿಗಳಾದ ನತಾಶಾ ನರ್ವಾಲ್ ಮತ್ತು ದೇವಾಂಗನಾ ಕಲಿತಾ, ಜಾಮಿಯಾ ಸಮನ್ವಯ ಸಮಿತಿ ಸದಸ್ಯರಾದ ಸಫೂರ ಜರ್ಗರ್, ಎಎಪಿ ಮಾಜಿ ಕೌನ್ಸಿಲರ್ ತಾಹಿರ್ ಹುಸೇನ್ ಮತ್ತು ಹಲವರ ವಿರುದ್ಧವೂ ಕಠಿಣ ಕಾನೂನಿನಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.