ನವದೆಹಲಿ: ಫೆಬ್ರವರಿ 20ರಂದು ಶಿವಮೊಗ್ಗದಲ್ಲಿ ನಡೆದ ಬಜರಂಗದಳದ ಕಾರ್ಯಕರ್ತರ ಹರ್ಷ ಕೊಲೆ ಪ್ರಕರಣವನ್ನು ರಾಜ್ಯ ಸರ್ಕಾರವು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಗೆ ವಹಿಸಿದೆ.
ರಾಷ್ಟ್ರೀಯ ತನಿಖಾ ದಳವು ಬುಧವಾರ ಎಫ್ಐಆರ್ ಅನ್ನು ದಾಖಲಿಸಿಕೊಂಡಿದ್ದು, ತನಿಖೆಯನ್ನು ಪ್ರಾರಂಭ ಮಾಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈಗಾಗಲೇ ರಾಜ್ಯ ಪೊಲೀಸರು ಹರ್ಷ ಅವರ ತಾಯಿ ನೀಡಿದ ದೂರಿನ ಮೇರೆಗೆ ತನಿಖೆ ನಡೆಸಿ ಕಾನೂನು ಬಾಹಿರ ಚಟುವಟಿಕೆಗಳ ಕಾಯ್ದೆ 1965 ರಡಿ ಶಿವಮೊಗ್ಗದಲ್ಲಿ 10 ಜನರನ್ನು ಬಂಧನಕ್ಕೆ ಒಳಪಡಿಸಿದ್ದಾರೆ. ಎಲ್ಲ ಬಂಧಿತರನ್ನು ರಾಷ್ಟ್ರೀಯ ತನಿಖಾದಳ ಶೀಘ್ರದಲ್ಲೇ ತನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆ ಇದೆ.
ಫೆಬ್ರವರಿ 22ರಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಹರ್ಷ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವಂತೆ ಮನವಿ ಮಾಡಿದ್ದರು. ಈ ಮನವಿಯ ಮೇರೆಗೆ ಕೇಂದ್ರ ಗೃಹಸಚಿವಾಲಯವು ಪ್ರಕಾಂಡ ತನಿಕೆ ನಡೆಸುವಂತೆ ಆದೇಶಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.