ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಜೀವನದ ಕಥೆಗಳ ಸಂಗ್ರಹವಾಗಿರುವ ʼಮೋದಿ ಸ್ಟೋರಿʼ ವೆಬ್ಸೈಟ್ ಅನ್ನು ಮಹಾತ್ಮಾ ಗಾಂಧಿಯವರ ಮೊಮ್ಮಗಳು ಸುಮಿತ್ರಾ ಗಾಂಧಿ ಕುಲಕರ್ಣಿ ಅವರು ಉದ್ಘಾಟಿಸಿದ್ದಾರೆ.
ʼಮೋದಿ ಸ್ಟೋರಿʼ ನರೇಂದ್ರ ಮೋದಿಯವರ ಜೀವನದ ಸ್ಪೂರ್ತಿದಾಯಕ ಕ್ಷಣಗಳನ್ನು ಒಟ್ಟುಗೂಡಿಸುವ ಸ್ವಯಂ-ಚಾಲಿತ ಉಪಕ್ರಮವಾಗಿದೆ. ಮೋದಿಯೊಂದಿಗೆ ನಿಕಟ ಸಂಪರ್ಕ ಹೊಂದಿರುವ ಜನರು ಮೋದಿಯವರ ಕಾರ್ಯಗಳ ಬಗ್ಗೆ ಮೆಲುಕು ಹಾಕಿದ ನೆನಪುಗಳನ್ನು ಇದು ಒಳಗೊಳ್ಳಲಿದೆ.
ಸಮಾರಂಭದಲ್ಲಿ ಮಾತನಾಡಿದ ಒಲಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಅವರು ನರೇಂದ್ರ ಮೋದಿಯವರೊಂದಿಗಿನ ಸಂವಾದದ ವೇಳೆ ಅವರ ಸರಳತೆಗೆ ಮೈಮರೆತಿದ್ದೆ, ನಾನು ದೇಶದ ಪ್ರಧಾನಿಯೊಂದಿಗೆ ಇದ್ದೇನೆ ಎಂದು ನನಗೆ ಅನಿಸಲಿಲ್ಲ ಎಂದಿದ್ದಾರೆ.
ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಅವರು ಟ್ವೀಟ್ನಲ್ಲಿ, ಪ್ರಧಾನಿ ಮೋದಿಯವರ ಜೀವನ ಪಯಣ ಮತ್ತು ಸಾರ್ವಜನಿಕ ಜೀವನದಲ್ಲಿ ಅವರು ಮಾಡಿದ ಆಸಕ್ತಿದಾಯಕ ಕಾರ್ಯಗಳು ಮತ್ತು ಅವರ ಜೀವನದಲ್ಲಿ ನಡೆದಿರುವ ಸ್ವಾರಸ್ಯಕರ ಘಟನೆಗಳನ್ನು ತಿಳಿದುಕೊಳ್ಳಲು Modistory.in ಅನ್ನು ವೀಕ್ಷಣೆ ಮಾಡಬಹುದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.