ಹಾವೇರಿ : ಶಿಗ್ಗಾಂವಿ ಹಾಗೂ ಸವಣೂರಿನ 120 ಹಳ್ಳಿಗಳಿಗೆ ಕುಡಿಯುವ ನೀರಿನ ಬೃಹತ್ ಯೋಜನೆಗೆ ಮಂಜೂರಾತಿ ನೀಡಲಾಗಿದ್ದು, ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಹಾವೇರಿ ಜಿಲ್ಲೆಯ ಶಿಗ್ಗಾಂವ್ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಆಯೋಜಿಸಿದ್ದ ‘ಕಂದಾಯ ದಾಖಲೆಗಳು ಮನೆ ಮನೆಗೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ತಿಮ್ಮಾಪುರ ಗ್ರಾಮದಲ್ಲಿ ರಸ್ತೆ, ಶಾಲಾ ಕೊಠಡಿ, ಸಭಾಭವನ, ಕಾಂಕ್ರೀಟ್ ಕಾಲುವೆ ನಿರ್ಮಾಣ ಸೇರಿದಂತೆ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಹಾವೇರಿ ಜಿಲ್ಲೆಗೆ ರೇಷ್ಮೆ ಉತ್ಪಾದಕರಿಗೆ ರೇಷ್ಮೆ ಮಾರುಕಟ್ಟೆ, ಕೈಗಾರಿಕೆ ಟೌನಶಿಪ್, ರಸ್ತೆಗಳ ನಿರ್ಮಾಣಕ್ಕೆ ಮಂಜೂರಾತಿ ಮಾಡಲಾಗಿದೆ. ಹಾವೇರಿ ಜಿಲ್ಲೆಯಲ್ಲಿ ಬಹುಮುಖ ಆರ್ಥಿಕ ಅಭಿವೃದ್ಧಿಯ ಚಿಂತನೆ ನಡೆಸಲಾಗಿದೆ ಎಂದರು.
ಮುಖ್ಯಮಂತ್ರಿ @BSBommai ಅವರು ಇಂದು ಶಿಗ್ಗಾಂವಿ ತಾಲ್ಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಜಲಜೀವನ್ ಮಿಷನ್- ಮನೆ ಮನೆಗೆ ಗಂಗೆ ಯೋಜನೆಯಡಿ 301 ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ನಲ್ಲಿಯ ನೀರನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಕುಡಿದು ತಪಾಸಣೆ ಮಾಡಿದರು.#JalJeevanMission pic.twitter.com/0XQPgLB2nT
— CM of Karnataka (@CMofKarnataka) March 26, 2022
’ಕಂದಾಯ ದಾಖಲೆಗಳು ಮನೆ ಮನೆಗೆ’ ಕಾರ್ಯಕ್ರಮ:
ಕಂದಾಯ ಅಧಿಕಾರಿಗಳೇ ಜನರ ಮನೆ ಬಾಗಿಲಿಗೆ ಬಂದು ಜಮೀನಿನ ಪತ್ರ, ಮ್ಯಾಪ್, ಆದಾಯ ಹಾಗೂ ಜಾತಿ ಪ್ರಮಾಣ ಪತ್ರ ಸೇರಿದಂತೆ ಕಂದಾಯ ದಾಖಲೆಗಳನ್ನು ನೀಡುವ ಮೂಲಕ ಸರ್ಕಾರವೇ ಮನೆ ಬಾಗಿಲಿಗೆ ಬರುವ ಕಾರ್ಯಕ್ರಮವಾಗಿದೆ. ಜನರ ಸಂಕಷ್ಟವನ್ನು ತಿಳಿದು ಪರಿಹಾರ ಸೂಚಿಸುವ ಜನಪರ ಸರ್ಕಾರ ನಮ್ಮದು. ರಾಜ್ಯದಲ್ಲಿ ಉಂಟಾದ ಬೆಳೆಹಾನಿಗೆ ಕೇಂದ್ರ ಸರ್ಕಾರದ ಪರಿಹಾರಕ್ಕೆ ರಾಜ್ಯ ಸರ್ಕಾರದ ಪರಿಹಾರವನ್ನೂ ಸೇರಿಸಿ ಒಣಬೇಸಾಯಕ್ಕೆ ಒಟ್ಟು 12600 ರೂ. ನೀರಾವರಿ ಜಮೀನಿಗೆ 25000 ರೂ. ಹಾಗೂ ತೋಟಗಾರಿಕೆ ಬೆಳೆಗೆ 28,000 ರೂ. ಪರಿಹಾರ ನೀಡಲಾಗುತ್ತಿದೆ. ಸಂಧ್ಯಾ ಸುರಕ್ಷಾ, ಅಂಗವಿಕಲರ ಮಾಸಾಶನ, ವಿಧವಾ ಮಾಸಾಶನಗಳನ್ನು ಗ್ರಾಮಪಂಚಾಯತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳ ಮೂಲಕ ನೀಡಲಾಗುತ್ತಿದೆ. ಸರ್ಕಾರದ ಸವಲತ್ತುಗಳನ್ನು ಅವರ ಮನೆಗೇ ನೀಡುವ ಕೆಲಸವನ್ನು ಮಾಡುವ ಮೂಲಕ ಜನಪರ, ಜನರಿಗೋಸ್ಕರ ಹಾಗೂ ಜನರ ಹತ್ತಿರವಿರುವಂತಹ ಸರ್ಕಾರ ಎಂದು ನಿರೂಪಿಸಲಾಗಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿ @BSBommai ಅವರು ಇಂದು ಶಿಗ್ಗಾವಿ ತಾಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆಯಡಿ ದಾಖಲೆಗಳನ್ನು ನೀಡುವ ಕಾರ್ಯಕ್ಕೆ ಚಾಲನೆ ನೀಡಿದರು.
ಗ್ರಾಮದ ಹಲವರಿಗೆ ಜಾತಿ, ಅಟ್ಲಾಸ್, ಪಹಣಿ ಪತ್ರಿಕೆ ನೀಡಿದರು. ಈ ಸಂದರ್ಭದಲ್ಲಿ ಹಾವೇರಿ ಜಿಲ್ಲೆಯ ಹಿರಿಯ ಅಧಿಕಾರಿಗಳು ಹಾಗೂ ಇತರೆ ನಾಯಕರು ಉಪಸ್ಥಿತರಿದ್ದರು. pic.twitter.com/phuZ0bIcM0
— CM of Karnataka (@CMofKarnataka) March 26, 2022
ವೈಶಿಷ್ಟ್ಯಪೂರ್ಣ ಬಜೆಟ್
ಶಿಕ್ಷಣ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಅಪೌಷ್ಟಿಕತೆ ನಿವಾರಣೆ, ಕೈಗಾರಿಕೆ, ಉದ್ಯೋಗ, ಸ್ತ್ರೀಶಕ್ತಿಸಂಘಗಳ ಸಬಲೀಕರಣ, ನೀರವರಿ, ರಸ್ತೆ ರಾಜ್ಯದ ಆರ್ಥಿಕ, ಸಾಮಾಜಿಕ ಬೆಳವಣಿಗೆಗೆ ವೈಶಿಷ್ಟ್ಯಪೂರ್ಣ ಬಜೆಟ್ ನೀಡಲಾಗಿದೆ. 33 ಲಕ್ಷ ರೈತರಿಗೆ ಸಾಲ ನೀಡುವ ಯೋಜನೆ, ಹಾಲು ಉತ್ಪಾದನೆ ಮಾಡುವ ರೈತರಿಗೆ ಆರ್ಥಿಕ ಸದೃಢತೆ ನೀಡಲು ಕ್ಷೀರ ಸಮೃದ್ಧಿ ಬ್ಯಾಂಕ್ ದೇಶದಲ್ಲಿಯೇ ಪ್ರಥಮ ಬಾರಿಗೆ ರಾಜ್ಯದಲ್ಲಿ ಸ್ಥಾಪಿಸಲಾಗುತ್ತಿದೆ. ಇದೇ ಏಪ್ರಿಲ್ 1 ರಂದು ಕೇಂದ್ರ ಗೃಹ ಸಚಿವರಾದ ಅಮಿತ್ ಷಾ ರವರು ಬ್ಯಾಂಕಿನ ಲೋಗೋವನ್ನು ಉದ್ಘಾಟನೆ ಮಾಡಲಿದ್ದಾರೆ ಎಂದು ತಿಳಿಸಿದರು.
ಆಡಳಿತದಲ್ಲಿ ಕ್ರಾಂತಿ ತಂದಿರುವ ಜನಸ್ಪಂದನಾ ಸರ್ಕಾರ
ತಿಮ್ಮಾಪುರ ಗ್ರಾಮದಲ್ಲಿ 512 ಪತ್ರಗಳನ್ನು 354 ಕುಟುಂಬಗಳಿಗೆ ಪಹಣಿ, ಅಟ್ಲಾಸ್ ನೀಡಲಾಗಿದೆ. 1,23,380 ಪ್ರತಿಗಳನ್ನು ವಿತರಣೆ ಮಾಡಲಾಗಿದೆ. ಗ್ರಾಮ ಒನ್ ಕೇಂದ್ರಗಳಲ್ಲಿ 75000 ಅರ್ಜಿಗಳು ಸ್ವೀಕೃತವಾಗಿದ್ದು, 56000 ಅರ್ಜಿಗಳಿಗೆ ಪರಿಹಾರ ನೀಡಲಾಗಿದೆ. ಬಡಜನರಿಗೆ 45,000 ಆಯುಷ್ಮಾನ್ ಕಾರ್ಡ್ ವಿತರಣೆಯಾಗಿದೆ. ಹಾವೇರಿ ಜಿಲ್ಲೆಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಮೆಗಾ ಡೈರಿಯನ್ನು ಘೋಷಣೆ ಮಾಡಲಾಗಿದೆ. ಆಡಳಿತದಲ್ಲಿ ಕ್ರಾಂತಿ ತಂದಿರುವ ಜನಸ್ಪಂದನಾ ಸರ್ಕಾರವಾಗಿದೆ ಎಂದು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.