ನವದೆಹಲಿ: ಎನ್ಜಿಒಗಳು, ಖಾಸಗಿ ಶಾಲೆಗಳು ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ 21 ಹೊಸ ಸೈನಿಕ ಶಾಲೆಗಳನ್ನು ಸ್ಥಾಪಿಸಲು ರಕ್ಷಣಾ ಸಚಿವಾಲಯ ಅನುಮೋದನೆ ನೀಡಿದೆ.
ದೇಶಾದ್ಯಂತ 100 ಹೊಸ ಸೈನಿಕ ಶಾಲೆಗಳನ್ನು ಸ್ಥಾಪಿಸುವ ಸರ್ಕಾರದ ಉಪಕ್ರಮದ ಆರಂಭಿಕ ಸುತ್ತಿನಲ್ಲಿ ಈ ಶಾಲೆಗಳನ್ನು ಸ್ಥಾಪಿಸಲಾಗುವುದು. ಇವು ಅಸ್ತಿತ್ವದಲ್ಲಿರುವ ಸೈನಿಕ ಶಾಲೆಗಳಿಗಿಂತ ಭಿನ್ನವಾಗಿರಲಿವೆ.
ಈ ಹೊಸ ಸೈನಿಕ ಶಾಲೆಗಳು ಸೈನಿಕ್ ಸ್ಕೂಲ್ಸ್ ಸೊಸೈಟಿಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತವೆ ಮತ್ತು ಸೊಸೈಟಿ ಸೂಚಿಸಿದ ಪಾಲುದಾರಿಕೆ ಕ್ರಮದಲ್ಲಿ ಹೊಸ ಸೈನಿಕ ಶಾಲೆಗಳಿಗೆ ನಿಯಮಗಳು ಮತ್ತು ನಿಬಂಧನೆಗಳನ್ನು ರೂಪಿಸಲಾಗುತ್ತದೆ.
100 ಹೊಸ ಸೈನಿಕ ಶಾಲೆಗಳ ಸ್ಥಾಪನೆಯ ಹಿಂದಿನ ಉದ್ದೇಶಗಳು ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುವುದು ಮತ್ತು ಸಶಸ್ತ್ರ ಪಡೆಗಳಿಗೆ ಸೇರುವುದು ಸೇರಿದಂತೆ ಉತ್ತಮ ಉದ್ಯೋಗಾವಕಾಶಗಳನ್ನು ನೀಡುವುದು. ಇಂದಿನ ಯುವಕರನ್ನು ನಾಳಿನ ಜವಾಬ್ದಾರಿಯುತ ಪ್ರಜೆಗಳಾಗಿ ರೂಪಿಸುವ ಮೂಲಕ ರಾಷ್ಟ್ರ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದೊಂದಿಗೆ ಕೈಜೋಡಿಸಲು ಖಾಸಗಿ ವಲಯಕ್ಕೆ ಇದು ಅವಕಾಶವನ್ನು ನೀಡುತ್ತದೆ. ಈ ಶಾಲೆಗಳಲ್ಲಿ ಹೊಸ ಸೈನಿಕ ಶಾಲೆಯ ಮಾದರಿಯ ಪ್ರವೇಶವು ಆರನೇ ತರಗತಿಯ ಹಂತದಲ್ಲಿ ಮಾತ್ರ ಇರುತ್ತದೆ ಎಂದು ಸಚಿವಾಲಯ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.