ನವದೆಹಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ದೇಶದಲ್ಲಿ 8 ಸಾವಿರ ಕೋಟಿಗೂ ಹೆಚ್ಚು ಡಿಜಿಟಲ್ ಪಾವತಿ ವಹಿವಾಟು ನಡೆದಿದೆ ಎಂದು ಸರ್ಕಾರ ಹೇಳಿದೆ.
ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಈ ವಿಷಯ ತಿಳಿಸಿದ್ದಾರೆ. ಡಿಜಿಟಲ್ ಪಾವತಿ ವಹಿವಾಟುಗಳು 2017-18 ರಲ್ಲಿ ಎರಡು ಸಾವಿರ ಕೋಟಿಯಿಂದ 2020-21 ರಲ್ಲಿ ಐದು ಸಾವಿರ ಕೋಟಿಗೆ ಬಹುಪಟ್ಟು ಬೆಳೆದಿದೆ ಎಂದು ಅವರು ಹೇಳಿದರು.
ಚಂದ್ರಶೇಖರ್ ಮಾತನಾಡಿ, BHIM-UPI ನಾಗರಿಕರ ಆದ್ಯತೆಯ ಪಾವತಿ ವಿಧಾನವಾಗಿ ಹೊರಹೊಮ್ಮಿದೆ ಮತ್ತು ಈ ವರ್ಷದ ಫೆಬ್ರವರಿವರೆಗೆ 8 ಲಕ್ಷದ 27 ಸಾವಿರ ಕೋಟಿ ರೂಪಾಯಿಗಳ ಮೌಲ್ಯದೊಂದಿಗೆ 452 ಕೋಟಿ ಡಿಜಿಟಲ್ ಪಾವತಿ ವ್ಯವಹಾರಗಳ ದಾಖಲೆಯನ್ನು ಸಾಧಿಸಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.