ನವದೆಹಲಿ: ಸ್ವಿಸ್ ಓಪನ್ ಸೂಪರ್ 300 ಬ್ಯಾಡ್ಮಿಂಟನ್ ಟೂರ್ನಮೆಂಟ್ನಲ್ಲಿ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಅವರು ಅಭೂತಪೂರ್ವ ಜಯ ಗಳಿಸಿದ್ದಾರೆ. ಈ ಸಾಧನೆಗಾಗಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಸಿಂಧು ಅವರನ್ನು ಅಭಿನಂದಿಸಿದ್ದಾರೆ.
ಟ್ವಿಟ್ ಮಾಡಿರುವ ಮೋದಿ, “2022 ರ ಸ್ವಿಸ್ ಓಪನ್ ಗೆದ್ದಿದ್ದಕ್ಕಾಗಿ ಪಿವಿ ಸಿಂಧು ಅವರಿಗೆ ಅಭಿನಂದನೆಗಳು. ಅವರ ಸಾಧನೆಗಳು ಭಾರತದ ಯುವಕರಿಗೆ ಸ್ಫೂರ್ತಿ ನೀಡುತ್ತವೆ. ಅವರ ಭವಿಷ್ಯದ ಪ್ರಯತ್ನಗಳಿಗಾಗಿ ಅವರಿಗೆ ಶುಭಾಶಯಗಳು” ಎಂದಿದ್ದಾರೆ.
ಈ ಗೆಲುವು ಪಿವಿ ಸಿಂಧು ಅವರ ಎರಡನೇ ಮಹಿಳಾ ಸಿಂಗಲ್ಸ್ ಗೆಲುವಾಗಿದ್ದು, ಅವರು ಸ್ವಿಟ್ಜರ್ಲೆಂಡ್ನಲ್ಲಿ ಥಾಯ್ಲೆಂಡ್ನ ಬುಸಾನನ್ ಒಂಗ್ಬಮ್ರುಂಗ್ಫಾನ್ ವಿರುದ್ಧ ಸುಲಭ ಜಯ ದಾಖಲಿಸಿದರು. ಒಒಂಗ್ಬಮ್ರುಂಗ್ಫಾನ್ ಅವರನ್ನು 21-16, 21-8 ಸೆಟ್ಗಳಿಂದ ಸೋಲಿಸಲು ಒಲಿಂಪಿಕ್ ಪದಕ ವಿಜೇತೆ ಸಿಂಧು 49 ನಿಮಿಷಗಳನ್ನು ತೆಗೆದುಕೊಂಡರು.
Congratulations to @Pvsindhu1 on winning the Swiss Open 2022. Her accomplishments inspire the youth of India. Best wishes to her for her future endeavours.
— Narendra Modi (@narendramodi) March 27, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.