ನವದೆಹಲಿ: ಪ್ರಮೋದ್ ಸಾವಂತ್ ಅವರು ಸೋಮವಾರ ಗೋವಾ ಮುಖ್ಯಮಂತ್ರಿಯಾಗಿ ಸತತ ಎರಡನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದರು.
ಟಾಲೀಗಾವೊದ ಡಾ.ಶ್ಯಾಮ ಪ್ರಸಾದ್ ಮುಖರ್ಜಿ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ, ಇತರ ಕೇಂದ್ರ ಸಚಿವರು ಮತ್ತು ಕನಿಷ್ಠ ಎಂಟು ರಾಜ್ಯಗಳ ಮುಖ್ಯಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಇತ್ತೀಚೆಗಷ್ಟೇ ನಡೆದ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 40 ಸ್ಥಾನಗಳ ಪೈಕಿ 20 ಸ್ಥಾನಗಳನ್ನು ಗೆದ್ದು, ಏಕೈಕ ಅತೀದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಬಹುಮತಕ್ಕಿಂತ ಒಂದು ಸ್ಥಾನ ಕಡಿಮೆಯಾದ ಹಿನ್ನೆಲೆಯಲ್ಲಿ ಮಹಾರಾಷ್ಟ್ರವಾದಿ ಗೋಮಾಂತಕ್ ಪಾರ್ಟಿ (ಎಂಜಿಪಿ) ಮತ್ತು ಸ್ವತಂತ್ರ ಅಭ್ಯರ್ಥಿಗಳ ಸಹಾಯದಿಂದ ರಾಜ್ಯದಲ್ಲಿ ಅಧಿಕಾರವನ್ನು ಉಳಿಸಿಕೊಂಡಿದೆ.
PM Narendra Modi attends the oath-taking ceremony of CM-designate Pramod Sawant, at Dr. Shyama Prasad Mukherjee Stadium in Goa. pic.twitter.com/4SoEwPPj5e
— ANI (@ANI) March 28, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.