ಜಮ್ಮು: ಇತ್ತೀಚಿನ ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಮಹತ್ವದ ಸುಧಾರಣೆಗಳು ನಡೆಯುತ್ತಿವೆ. ಅಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳಲಾಗಿದೆ ಜಾಗಗಳು ಇದೀಗ ಮತ್ತೆ ಸರ್ಕಾರದ ವಶಕ್ಕೆ ಸೇರುತ್ತಿವೆ. ಕೆಲವು ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದ ಸುಮಾರು 300 ಕೋಟಿ ರೂಪಾಯಿ ಮೌಲ್ಯದ ಸರಕಾರಿ ಜಾಗವನ್ನು ಜಮ್ಮು ಆಡಳಿತ ನಿನ್ನೆ ಮರು ವಶಪಡಿಸಿಕೊಂಡಿದೆ.
ಕಾಂಗ್ರೆಸ್ ಪಕ್ಷದ ಇಬ್ಬರು ಮಾಜಿ ಸಚಿವರು ಒತ್ತುವರಿ ಮಾಡಿಕೊಂಡ ಜಾಅಗವನ್ನು ಕೂಡ ಮರು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ತಾಜ್ ಮೊಹಿದ್ದೀನ್ ಅವರಿಗೆ ಸೇರಿದ ಅತಿಥಿಗೃಹ, ಡೇರೆ ಸಂಸ್ಕರಣಾ ಘಟಕವನ್ನು ನೆಲಸಮ ಮಾಡಲಾಗಿದೆ. ಅವರ ಅಕ್ರಮ ವಶದಲ್ಲಿದ್ದ 33 ಎಕರೆ ಜಮೀನನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಒತ್ತುವರಿ ತೆರವು ಕಾರ್ಯಾಚರಣೆ ಸಂದರ್ಭದಲ್ಲಿ ಇತರ ಅನೇಕ ಕಟ್ಟಡಗಳನ್ನು ನೆಲಸಮ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.