ನವದೆಹಲಿ: ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಎಲ್ಲಾ ಕೋವಿಡ್ ಶಿಷ್ಟಾಚಾರಗಳೊಂದಿಗೆ ಅಮರನಾಥ ಗುಹೆ ದೇಗುಲಕ್ಕೆ 43 ದಿನಗಳ ಪವಿತ್ರ ಯಾತ್ರೆಯು ಜೂನ್ 30 ರಂದು ಪ್ರಾರಂಭವಾಗುತ್ತಿದೆ.
ಯಾತ್ರೆಯು ಸಂಪ್ರದಾಯದ ಪ್ರಕಾರ, ರಕ್ಷಾ ಬಂಧನದ ದಿನವಾದ11 ಆಗಸ್ಟ್ 2022 ರಂದು ಮುಕ್ತಾಯಗೊಳ್ಳಲಿದೆ. ಯಾತ್ರೆಯ ಆನ್ಲೈನ್ ನೋಂದಣಿ ಏಪ್ರಿಲ್ 11 ರಿಂದ ಪ್ರಾರಂಭವಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಈ ವರ್ಷ ಪವಿತ್ರ ಗುಹೆಗೆ ಪೂಜೆಯನ್ನು ಸಲ್ಲಿಸಲು ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸುವ ನಿರೀಕ್ಷೆಯಿರುವುದರಿಂದ ಅಧಿಕಾರಿಗಳು ಪೂರ್ವಭಾವಿಯಾಗಿ ಮತ್ತು ಸುಗಮ ಯಾತ್ರೆ ನಡೆಸಲು ವಿಸ್ತಾರವಾದ ವ್ಯವಸ್ಥೆಗಳನ್ನು ಖಚಿತಪಡಿಸಿಕೊಳ್ಳಬೇಕು ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಕರೆ ನೀಡಿದ್ದಾರೆ.
ಯಾತ್ರಿಕರ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಯಾತ್ರೆ ಸಾಗುವ ಮಾರ್ಗದಲ್ಲಿ ಯಾತ್ರಿಕರ ಚಲನವಲನವನ್ನು ಪತ್ತೆಹಚ್ಚಲು ರೇಡಿಯೊ ಫ್ರೀಕ್ವೆನ್ಸಿ ಐಡೆಂಟಿಫಿಕೇಶನ್ (ಆರ್ಎಫ್ಐಡಿ) ವ್ಯವಸ್ಥೆಯನ್ನು ಸರ್ಕಾರ ಪರಿಚಯಿಸುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.