ನವದೆಹಲಿ: ದೇಶದ 14 ಮಾಜಿ ಪ್ರಧಾನಿಗಳ ಕೊಡುಗೆಯನ್ನು ಗುರುತಿಸಲು ಎನ್ಡಿಎ ಸರ್ಕಾರ ಕ್ರಮಗಳನ್ನು ಕೈಗೊಂಡಿದ್ದು, ನೆಹರು ಮ್ಯೂಸಿಯಂನಲ್ಲಿರುವ “ಪ್ರಧಾನಮಂತ್ರಿ ಸಂಗ್ರಹಾಲಯ (ಪಿಎಂ ಮ್ಯೂಸಿಯಂ)” ಏಪ್ರಿಲ್ 14 ರಂದು ಉದ್ಘಾಟನೆಯಾಗಲಿದೆ, ಇದು ಎಲ್ಲಾ ಮಾಜಿ ಪ್ರಧಾನಿಗಳ ಕಾರ್ಯಗಳನ್ನು ತೋರಿಸುತ್ತದೆ.
ಎಲ್ಲಾ ಪ್ರಧಾನ ಮಂತ್ರಿಗಳ ಕೊಡುಗೆಗಳನ್ನು ಗುರುತಿಸುವುದನ್ನು ತಮ್ಮ ಸರ್ಕಾರ ಖಚಿತಪಡಿಸಿದೆ. ಹಿಂದಿನ ಪ್ರಧಾನಿಗಳ ಕೊಡುಗೆಗಳನ್ನು ಗುರುತಿಸಲು ಕ್ರಮಕೈಗೊಂಡಿರುವುದು ಎನ್ಡಿಎ ಸರ್ಕಾರ ಮಾತ್ರ ಎಂದು ಪ್ರಧಾನಿ ಮೋದಿ ಬಿಜೆಪಿ ಸಂಸದರ ಸಭೆಯಲ್ಲಿ ಹೇಳಿದ್ದಾರೆ.
ಈ ವೇಳೆ “ಬಿಆರ್ ಅಂಬೇಡ್ಕರ್ ಮ್ಯೂಸಿಯಂ” ಗೆ ಭೇಟಿ ನೀಡುವಂತೆ ಪ್ರಧಾನಿ ಮೋದಿ ಬಿಜೆಪಿ ಸಂಸದರಿಗೆ ಸೂಚಿಸಿದರು ಎನ್ನಲಾಗಿದೆ.
ಬಿಆರ್ ಅಂಬೇಡ್ಕರ್ ಮ್ಯೂಸಿಯಂ ಅನ್ನು ಏಪ್ರಿಲ್ 14 ರಂದು ರಾಷ್ಟ್ರ ರಾಜಧಾನಿಯಲ್ಲಿ ಬಿಆರ್ ಅಂಬೇಡ್ಕರ್ ಜನ್ಮದಿನದಂದು ಉದ್ಘಾಟಿಸಲು ನಿರ್ಧರಿಸಲಾಗಿದೆ.
ಇಂದು ನವದೆಹಲಿಯ ಅಂಬೇಡ್ಕರ್ ಕೇಂದ್ರದಲ್ಲಿ ನಡೆದ ಸಂಸದೀಯ ಪಕ್ಷದ ಸಭೆಯಲ್ಲಿ ಪ್ರಧಾನಿ ಮೋದಿ, ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಗೃಹ ಸಚಿವ ಅಮಿತ್ ಶಾ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಭಾಗವಹಿಸಿದ್ದರು.
ಪಕ್ಷದ ಸಂಸ್ಥಾಪನಾ ದಿನವಾದ ಏಪ್ರಿಲ್ 6 ರಿಂದ ಬಿಆರ್ ಅಂಬೇಡ್ಕರ್ ಅವರ ಜನ್ಮದಿನದ ದಿನವಾದ ಏಪ್ರಿಲ್ 14 ರವರೆಗೆ ಬಿಜೆಪಿಯಿಂದ ಸರಣಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.
ಇದೇ ವೇಳೆ, ರಕ್ತದಾನ ಶಿಬಿರಗಳು ಸೇರಿದಂತೆ ಸಾರ್ವಜನಿಕ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ಮಾಡಬೇಕಾದ ಪಕ್ಷದ ಮುಂಬರುವ ಸಂಸ್ಥಾಪನಾ ದಿನದ ಕಾರ್ಯಕ್ರಮಗಳ ಕುರಿತು ಜೆಪಿ ನಡ್ಡಾ ಚರ್ಚಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.