ನವದೆಹಲಿ: ಪ್ರಸ್ತುತ ದೇಶದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ ಹೆಚ್ಚಳವಾಗಿದೆ. ಪ್ರಧಾನಿ ಮೋದಿ ಸರ್ಕಾರದ ಅವಧಿಯಲ್ಲಿ ಒಟ್ಟಾರೆ 500.5 ಬಿಲಿಯನ್ ಡಾಲರ್ ಹೂಡಿಕೆಯಾಗಿದ್ದು, ಇದು ಯುಪಿಎ ಅವಧಿಯ 10 ವರ್ಷಗಳಲ್ಲಿ ಬಂದ ಹೂಡಿಕೆಗಿಂತ ಶೇ.65ರಷ್ಟು ಹೆಚ್ಚು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.
ಈ ಮೂಲಕ ಎಫ್ಡಿಐ ಸ್ವೀಕರಿಸುವ ವಿಶ್ವದ ಐದು ಅಗ್ರ ರಾಷ್ಟ್ರಗಳಲ್ಲಿ ಭಾರತವೂ ಒಂದಾಗಿದೆ ಎಂದು ಅವರು ಹೇಳಿದ್ದಾರೆ.
ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ ವಿರುದ್ಧ ಕಿಡಿಕಾರಿದ ಅವರು, ದೇಶದ ಆರ್ಥಿಕತೆಯನ್ನು ಹೇಗೆ ನಿಭಾಯಿಸಬೇಕೆಂದು ನಮ್ಮ ಸರ್ಕಾರಕ್ಕೆ ಚೆನ್ನಾಗಿ ಗೊತ್ತಿದೆ. ಹಣಕಾಸಿನ ಸ್ಥಿತಿಗತಿಯ ಬಗ್ಗೆ ಅಂಕಿಅಂಶಸಹಿತ ವಿವರಿಸುತ್ತೇನೆ ಎಂದಿದ್ದಾರೆ.
ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ತೆರಿಗೆ ಹೆಚ್ಚಳ ಮಾಡಿಲ್ಲ. ಜಗತ್ತಿನ 32 ರಾಷ್ಟ್ರಗಳು ತೆರಿಗೆ ಹೆಚ್ಚಿಸಿವೆ ಎಂದಿದ್ದಾರೆ.
2021ರ ಆರ್ಥಿಕ ವರ್ಷದಲ್ಲಿ 81.72 ಬಿಲಿಯನ್ ಡಾಲರ್ನಷ್ಟು ಎಫ್ಡಿಐ ದೇಶಕ್ಕೆ ಹರಿದು ಬಂದಿದೆ. ಇದರ ಹಿಂದಿನ ವರ್ಷ 74 ಬಿಲಿಯನ್ ಡಾಲರ್ ಎಫ್ಡಿಐ ಹರಿದು ಬಂದಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.