ಇಸ್ಲಾಮಾಬಾದ್: ಭಾರತ ಯುದ್ಧ ಸಾರಿದರೆ ಅದನ್ನು ಎದುರಿಸಲು ನಾವು ಸನ್ನದ್ಧರಾಗಿದ್ದೇವೆ ಎಂದು ಪಾಕ್ ರಕ್ಷಣಾ ಸಚಿವ ಖ್ವಾಜಾ ಆಸೀಫ್ ತಿಳಿದ್ದಾರೆ.
ಇತ್ತೀಚಿಗಷ್ಟೇ ಸೇನಾ ಮುಖ್ಯಸ್ಥ ದಲ್ಬೀರ್ ಸಿಂಗ್ ಅವರು, ಭವಿಷ್ಯದಲ್ಲಿ ಉಂಟಾಗಬಹುದಾದ ಕ್ಷಿಪ್ರ ಯುದ್ಧವನ್ನು ಎದುರಿಸಲು ಸಜ್ಜಾಗಿದ್ದೇವೆ ಎಂಬ ಹೇಳಿಕೆ ನೀಡಿದ್ದರು. ಅವರ ಈ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಪಾಕ್ ಈ ಮಾತನ್ನಾಡಿದೆ.
1965ರಲ್ಲಿ ಭಾರತ ಲಾಹೋರನ್ನು ವಶಪಡಿಸಲು ಮುಂದಾಗಿತ್ತು, ಆದರೆ ಅವರ ಕನಸನ್ನು ನಾವು ನುಚ್ಚುನೂರು ಮಾಡಿದ್ದೆವು. ಇನ್ನು ಮುಂದೆಯೂ ಹಾಗೆಯೇ ಮಾಡುತ್ತೇವೆ. ಈಗ ನಾವು ಮೊದಲಿಗಿಂತ ಹೆಚ್ಚು ವೃತ್ತಿಪರ ಹಾಗೂ ಸಾಮರ್ಥ್ಯವುಳ್ಳವರಾಗಿದ್ದೇವೆ ಎಂದಿದ್ದಾರೆ.
ಈ ಹಿಂದೆಯೂ ಅನೇಕ ಬಾರಿ ಆಸೀಫ್ ಇಂತಹ ಹೇಳಿಕೆಗಳನ್ನು ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.