ನವದೆಹಲಿ: ಶೇಕಡಾ 100 ರಷ್ಟು ವಿದ್ಯುದ್ದೀಕರಣವನ್ನು ಪೂರ್ಣಗೊಳಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಕೊಂಕಣ ರೈಲ್ವೇಯನ್ನು ಶ್ಲಾಘಿಸಿದ್ದಾರೆ ಮತ್ತು ಸುಸ್ಥಿರ ಅಭಿವೃದ್ಧಿಗೆ ಹೊಸ ಮಾನದಂಡಗಳನ್ನು ಇದು ಸ್ಥಾಪಿಸಿದೆ ಎಂದು ಹೇಳಿದ್ದಾರೆ.
ಮಹಾರಾಷ್ಟ್ರದ ರೋಹಾ ಮತ್ತು ಕರ್ನಾಟಕದ ಥೋಕೂರ್ ನಡುವಿನ ಸಂಪೂರ್ಣ 741 ಕಿಲೋಮೀಟರ್ ಮಾರ್ಗದಲ್ಲಿ ವಿದ್ಯುದ್ದೀಕರಣವನ್ನು ಪೂರ್ಣಗೊಳಿಸಲಾಗಿದೆ ಎಂದು ಕೊಂಕಣ ರೈಲ್ವೇ ಕಾರ್ಪೊರೇಷನ್ ಮಂಗಳವಾರ ತಿಳಿಸಿದೆ.
ಟ್ವಿಟ್ ಮಾಡಿರುವ ಮೋದಿ, “ಮಿಷನ್ 100% ವಿದ್ಯುದೀಕರಣದ ಅಮೋಘ ಯಶಸ್ಸಿಗಾಗಿ ಮತ್ತು ಸುಸ್ಥಿರ ಅಭಿವೃದ್ಧಿಯ ಹೊಸ ಮಾನದಂಡಗಳನ್ನು ಹೊಂದಿಸಿದಕ್ಕಾಗಿ ಸಂಪೂರ್ಣ ಕೊಂಕಣ ರೈಲ್ವೆ ತಂಡಕ್ಕೆ ಅಭಿನಂದನೆಗಳು” ಎಂದಿದ್ದಾರೆ.
ವಿದ್ಯುದೀಕರಣವು ಇಂಧನದ ಮೇಲೆ 150 ಕೋಟಿ ರೂಪಾಯಿಗಳ ಉಳಿತಾಯ ಮಾಡಲಿದೆ, ಡೀಸೆಲ್ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುತ್ತದೆ, ಜೊತೆಗೆ ತಡೆರಹಿತ ಮತ್ತು ಮಾಲಿನ್ಯ-ಮುಕ್ತ ಕಾರ್ಯಾಚರಣೆಗಳನ್ನು ಖಚಿತಪಡಿಸುತ್ತದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.
Congratulations to the entire @KonkanRailway Team for the remarkable success of ‘Mission 100% Electrification’ and setting new benchmarks of sustainable development. https://t.co/NB0DAZIVNz
— Narendra Modi (@narendramodi) March 30, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.