ನವದೆಹಲಿ: ಮೇ ತಿಂಗಳಲ್ಲಿ ಕ್ಯಾನ್ಬೆರಾದಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುಂಚಿತವಾಗಿ ಭಾರತ ಮತ್ತು ಆಸ್ಟ್ರೇಲಿಯಾ ಮುಕ್ತ ವ್ಯಾಪಾರ ಒಪ್ಪಂದವನ್ನು (FTA) ಅಂತಿಮಗೊಳಿಸಲು ಸಿದ್ಧವಾಗಿವೆ.
ಆಸ್ಟ್ರೇಲಿಯಾದ ವ್ಯಾಪಾರ ಸಚಿವ ಡಾನ್ ತೆಹಾನ್ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿ, ಭಾರತದ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರೊಂದಿಗೆ ಈ ಬಗ್ಗೆ ಪ್ರತಿದಿನ ಸಭೆಗಳನ್ನು ನಡೆಸುತ್ತಿರುವುದಾಗಿ ಮತ್ತು ಎರಡೂ ಕಡೆಯವರು ಒಪ್ಪಂದದ ಸನಿಹದಲ್ಲಿರುವುದಾಗಿ ಹೇಳಿದ್ದಾರೆ.
“ಎರಡೂ ರಾಷ್ಟ್ರಗಳ ಹಿತಾಸಕ್ತಿಯನ್ನು ಹೊಂದಿರುವ ಒಪ್ಪಂದವನ್ನು ಸಾಕಾರಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ಎರಡೂ ಕಡೆಯವರು ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದಾರೆ” ಎಂದು ತೆಹಾನ್ ಹೇಳಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮುಕ್ತ ವ್ಯಾಪಾರ ಒಪ್ಪಂದ ಮಾತುಕತೆಗಳು ಮೊದಲು 2011 ರಲ್ಲಿ ಪ್ರಾರಂಭವಾಯಿತು ಆದರೆ ಮಾತುಕತೆಗಳನ್ನು 2015 ರಲ್ಲಿ ಸ್ಥಗಿತಗೊಳಿಸಲಾಯಿತು. ಆದರೆ ನಂತರ ಪ್ರಧಾನಿ ನರೇಂದ್ರ ಮೋದಿ ಮತ್ತು ಪ್ರಧಾನಿ ಸ್ಕಾಟ್ ಮಾರಿಸನ್ ನಡುವಿನ ಬಾಂಧವ್ಯಗಳು 2020 ರಿಂದ ಮಾತುಕತೆ ಪುನರಾರಂಭಗೊಳ್ಳುವಂತೆ ಮಾಡಿತು.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿಮುಖ ವ್ಯಾಪಾರವು 2020 ರಲ್ಲಿ AU $24.3 ಬಿಲಿಯನ್ ಆಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.