ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಾಳೆ ರಾತ್ರಿ ರಾಜ್ಯಕ್ಕೆ ಆಗಮಿಸಲಿದ್ದು ಏಪ್ರಿಲ್ 1ರಂದು ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ಮುಖ್ಯಮಂತ್ರಿಗಳು ಹೇಳಿದರು.
ತುಮಕೂರಿನ ಸಿದ್ದಗಂಗಾ ಮಠದಲ್ಲಿ ಸಹಕಾರಿ ಸಂಘಗಳ ಸಮಾವೇಶ, ಕಾರ್ಯಕ್ರಮಗಳು, ಮುದ್ದೇನಹಳ್ಳಿ ಕಾಲೇಜು ಶಿಲಾನ್ಯಾಸ ಸಮಾರಂಭದಲ್ಲಿ ಭಾಗವಹಿಸುವ ಜತೆಗೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ವಿವರ ನೀಡಿದರು.
ಅರಮನೆ ಮೈದಾನದಲ್ಲಿ ಏಪ್ರಿಲ್ 1 ರಂದು ಅಮಿತ್ ಶಾ ಅವರು ಭಾಗಿಯಾಗಲಿರುವ ರಾಜ್ಯ ಸಹಕಾರ ಸಮಾವೇಶ ಕಾರ್ಯಕ್ರಮದ ವೇದಿಕೆ ಸಿದ್ಧತೆಯನ್ನು ಬೊಮ್ಮಾಯಿ ಅವರು ಇಂದು ಪರಿಶೀಲಿಸಿದರು.
ಅಮಿತ್ ಶಾ ಅವರ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ನಿನ್ನೆ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಮುಖ್ಯ ಮಂತ್ರಿ @BSBommai ಅವರು ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರ ರಾಜ್ಯ ಪ್ರವಾಸದ ವಿವರಗಳ ಕುರಿತಂತೆ ಇಂದು ವಿಧಾನ ಸೌಧದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿದರು. pic.twitter.com/LRZ7sX4GRW
— CM of Karnataka (@CMofKarnataka) March 30, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.