ಬೆಂಗಳೂರು: ರಾಜ್ಯದಲ್ಲಿ ಹಲವಾರು ವಿಷಯಗಳು ಚರ್ಚೆಗೆ ಬಂದಿವೆ. ಸಾರ್ವಜನಿಕ ವಲಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲರೂ ಕೂಡ ಸಹಕರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ಶಾಂತಿ ಮತ್ತು ಪ್ರಗತಿಗೆ ಕರ್ನಾಟಕ ಹೆಸರುವಾಸಿ: ಎಲ್ಲರೂ *ಸಂಯಮದಿಂದ ವರ್ತಿಸಬೇಕು
ಕೋಮುವಾದ ಜಾಗತಿಕ ಸಂಘರ್ಷವಾಗುತ್ತಿದೆ ಎಂದು ರಾಜ್ಯದ ಬೆಳವಣಿಗೆಗಳ ಬಗ್ಗೆ ಕಿರಣ ಮಜುಂದಾರ್ ಷಾ ಅವರು ಟ್ವೀಟ್ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಸಮವಸ್ತ್ರದ ವಿಷಯ ಈಗಾಗಲೇ ಇತ್ಯರ್ಥವಾಗಿದೆ. ಬೇರೆ ಬೇರೆ ವಿಷಯಗಳ ಬಗ್ಗೆ ತಮ್ಮ ತಮ್ಮ ನಂಬಿಕೆಗಳ ಆಧಾರದ ಮೇಲೆ ಇಷ್ಟು ವರ್ಷ ನಾವೆಲ್ಲರೂ ಬದುಕು ನಡೆಸುತ್ತಿದ್ದೇವೆ. ಕರ್ನಾಟಕ ರಾಜ್ಯ ಶಾಂತಿಗೆ ಮತ್ತು ಪ್ರಗತಿಗೆ ಹೆಸರಾಗಿದೆ. ಯಾವುದೇ ರೀತಿಯ ತೊಂದರೆಯಾಗದಂತೆ ಎಲ್ಲರೂ ಸಂಯಮವನ್ನು ತಾಳಬೇಕು. ಸಾಮಾಜಿಕವಾಗಿ ಹಲವಾರು ಸಮಸ್ಯೆಗಳು ಉದ್ಭವವಾಗುವ ಸಂದರ್ಭದಲ್ಲಿ ಕೂತು ಚರ್ಚೆ ಮಾಡಿ ಬಗೆಹರಿಸಲು ಸಾಧ್ಯವಿದೆ. ಆದ್ದರಿಂದ ಎಲ್ಲರೂ ಸಂಯಮದಿಂದ ವರ್ತಿಸಬೇಕು ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.