ಬೆಂಗಳೂರು: ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯ 115ನೇ ಜಯಂತಿಯನ್ನು ಇಂದು ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿದ್ದಗಂಗಾಮಠದಲ್ಲಿ ಬೃಹತ್ ಸಮಾರಂಭವನ್ನು ಆಯೋಜಿಸಲಾಗಿದ್ದು, ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಇದರಲ್ಲಿ ಭಾಗಿಯಾಗಲಿದ್ದಾರೆ.
ಶಿವಕುಮಾರ ಸ್ವಾಮೀಜಿ ಅವರ ಜಯಂತಿಯ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿ ಪ್ರಧಾನಿ ನರೇಂದ್ರ ಮೋದಿಯವರು ಗೌರವಾರ್ಪಣೆ ಮಾಡಿದ್ದಾರೆ.
“ಪೂಜನೀಯರಾದ ಗೌರವಾನ್ವಿತ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ನಾನು ನನ್ನ ಗೌರವ ನಮನ ಸಲ್ಲಿಸುವೆ. ಸ್ವಾಮೀಜಿಯವರು ಅಸಂಖ್ಯಾತ ಜನರ ಹೃದಯದಲ್ಲಿ ಅಮರರಾಗಿದ್ದಾರೆ” ಎಂದು ಮೋದಿ ಕನ್ನಡದಲ್ಲಿ ಟ್ವಿಟ್ ಮಾಡಿದ್ದಾರೆ.
ಪೂಜನೀಯರಾದ ಗೌರವಾನ್ವಿತ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ನಾನು ನನ್ನ ಗೌರವ ನಮನ ಸಲ್ಲಿಸುವೆ. ಸ್ವಾಮೀಜಿಯವರು ಅಸಂಖ್ಯಾತ ಜನರ ಹೃದಯದಲ್ಲಿ ಅಮರರಾಗಿದ್ದಾರೆ. pic.twitter.com/z5nsm0WWq8
— Narendra Modi (@narendramodi) April 1, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.