ತುಮಕೂರು: ಇಂದು ತ್ರಿವಿಧ ದಾಸೋಹಿ ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ 115ನೇ ಜನ್ಮ ದಿನವನ್ನು ಆಚರಣೆ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಹತ್ವದ ಘೋಷಣೆ ಮಾಡಿದ್ದಾರೆ. ಶಾಲೆಗಳಲ್ಲಿ ನಡೆಯುತ್ತಿರುವ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮಕ್ಕೆ ಶಿವಕುಮಾರ ಸ್ವಾಮೀಜಿ ಅವರ ಹೆಸರಿಡಲಾಗುವುದು ಎಂದು ಘೋಷಿಸಿದ್ದಾರೆ.
ಸಿದ್ಧಗಂಗಾ ಮಠದಲ್ಲಿ ಇಂದು ಸ್ವಾಮೀಜಿ ಅವರ ಜಯಂತಿಯ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಮಠದ ಅಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಗದ್ದುಗೆ ಪೂಜೆ ನೆರವೇರಿಸುವ ಮೂಲಕ ಕಾರ್ಯಕ್ರಮವನ್ನು ಆರಂಭಿಸಿದ್ದಾರೆ. ಈ ಕಾರ್ಯಕ್ರಮಗಳಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವಾರು ಗಣ್ಯರು ಭಾಗಿಯಾಗಿದ್ದಾರೆ.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಬಿಸಿಯೂಟ ಯೋಜನೆಗೆ ಶ್ರೀಗಳ ಹೆಸರಿಡುವುದಾಗಿ ಘೋಷಿಸಿದ್ದಾರೆ.
ಶಿವಕುಮಾರ ಸ್ವಾಮೀಜಿಗಳ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ರಾಜ್ಯಗಳ ವಿವಿಧೆಡೆಗಳಿಂದ ಭಕ್ತರು ಅಪಾರ ಸಂಖ್ಯೆಯಲ್ಲಿ ಸಿದ್ದಗಂಗಾ ಮಠಕ್ಕೆ ಆಗಮಿಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.