ನವದೆಹಲಿ: ತೀವ್ರ ಸ್ವರೂಪದ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾದಲ್ಲಿ ಜನರು ಆಕ್ರೋಶ ಸ್ಪೋಟಗೊಳ್ಳುತ್ತಿದೆ. ನೂರಾರು ಜನರು ಅಲ್ಲಿನ ಅಧ್ಯಕ್ಷರ ಮನೆಗೆ ನುಗ್ಗಲು ಪ್ರಯತ್ನಿಸಿದ ಹಿನ್ನೆಲೆಯಲ್ಲಿ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ.
ಶ್ರೀಲಂಕಾದ ಅಧ್ಯಕ್ಷ ಗೋತಬಯ ರಾಜಪಕ್ಸೆ ಅವರು ನಿನ್ನೆ ಗೆಜೆಟ್ ಅನ್ನು ಹೊರಡಿಸಿದ್ದು, ತಕ್ಷಣವೇ ಜಾರಿಗೆ ಬರುವಂತೆ ದ್ವೀಪ ರಾಷ್ಟ್ರದಲ್ಲಿ ಸಾರ್ವಜನಿಕ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ.
ಸಾರ್ವಜನಿಕ ಭದ್ರತೆ, ಸಾರ್ವಜನಿಕ ಸುವ್ಯವಸ್ಥೆಯ ರಕ್ಷಣೆ ಮತ್ತು ಸಮುದಾಯದ ಜೀವನಕ್ಕೆ ಅಗತ್ಯವಾದ ಸರಬರಾಜು ಮತ್ತು ಸೇವೆಗಳ ನಿರ್ವಹಣೆಯ ಹಿತದೃಷ್ಟಿಯಿಂದ ಸಾರ್ವಜನಿಕ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ ಎಂದು ಗೆಜೆಟ್ನಲ್ಲಿ ತಿಳಿಸಲಾಗಿದೆ.
ಶ್ರೀಲಂಕಾ ರಾಷ್ಟ್ರದಾದ್ಯಂತ ಅಧ್ಯಕ್ಷರ ಪದಚ್ಯುತಿಗೆ ಕರೆ ನೀಡುವ ಪ್ರತಿಭಟನೆ ನಡೆಸಿದರೆ ಶಂಕಿತರನ್ನು ಬಂಧಿಸಲು ಮತ್ತು ಬಂಧನದಲ್ಲಿಡಲು ಮಿಲಿಟರಿಗೆ ಅವಕಾಶ ನೀಡುವ ಕಠಿಣ ಕಾನೂನುಗಳನ್ನು ಅಲ್ಲಿ ಜಾರಿಗೊಳಿಸಲಾಗಿದೆ.
ಶ್ರೀಲಂಕಾ ಪಶ್ಚಿಮ ಪ್ರಾಂತ್ಯದಲ್ಲಿ ಆರು ಗಂಟೆಗಳ ಕಾಲ ಪೊಲೀಸ್ ಕರ್ಫ್ಯೂ ವಿಧಿಸಲಾಗಿದೆ. ಇದಕ್ಕೂ ಮುನ್ನ, ದ್ವೀಪ ರಾಷ್ಟ್ರದಲ್ಲಿ ಅಸ್ತಿತ್ವದಲ್ಲಿರುವ ಆರ್ಥಿಕ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸರ್ಕಾರದ ವಿಫಲತೆಯ ಬಗ್ಗೆ ಪ್ರತಿಭಟನೆ ನಡೆಸಲು ಜನರು ಗುರುವಾರ ಅಧ್ಯಕ್ಷರ ನಿವಾಸದ ಹೊರಗೆ ಜಮಾಯಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.